

ರಟ್ಟಿಹಳ್ಳಿ: ಸಾಲಬಾಧೆಯಿಂದ ರೈತರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಕಡೂರ ಗ್ರಾಮದಲ್ಲಿ ನಡೆದಿದೆ.
ಪರ್ವತಗೌಡ ನಂದೆಪ್ಪಗೌಡ ಲಕ್ಕನಗೌಡ್ರ (60) ಮೃತ ರೈತ.
ಇವರು ಮನೆ ಕಟ್ಟುವ ಸಲುವಾಗಿ 3.50 ಲಕ್ಷ ರೂ. ಹಾಗೂ ಕೃಷಿಗಾಗಿ 60 ಸಾವಿರ ರೂ. ಸಾಲ ಮಾಡಿಕೊಂಡಿದ್ದರು. ಜಮೀನಿನಲ್ಲಿ ಬೆಳೆದಿದ್ದ ಬೆಳೆ ಸರಿಯಾಗಿ ಬಾರದ ಕಾರಣ ಸಾಲ ತೀರಿಸಲಾಗದೆ ಮನೆಯಲ್ಲಿಯೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ರಟ್ಟಿಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.