ಜಿಲ್ಲಾ ಕಾರ್ಮಿಕ ಅಧಿಕಾರಿ ತರುನ್ನುಮ್ ಬೆಂಗಾಲಿ ಮಾತನಾಡಿ, ಜೀತಪದ್ದತಿ ಮತ್ತು ಬಾಲ ಕಾರ್ಮಿಕ ಪದ್ದತಿಗೆ ಒಂದಕ್ಕೊಂದು ಸಂಬಂಧವಿದೆ. 14 ವರ್ಷದ ಒಳಗಿನ ಮಕ್ಕಳನ್ನು ಕೆಲಸಕ್ಕೆ ಇಟ್ಟುಕೊಂಡರೆ 20 ಸಾವಿರದಿಂದ 50 ಸಾವಿರ ರೂ.ವರೆಗೆ ದಂಡ ವಿಧಿಸಲಾಗುತ್ತದೆ. ಇಟ್ಟಿಗೆ ಭಟ್ಟಿ, ಕೋಳಿ ಸಾಕಾಣಿಕೆ ಕೇಂದ್ರಗಳು, ರೇಷ್ಮೆ ನೂಲು ಬಿಚ್ಚುವ ಕೇಂದ್ರಗಳು, ಹೋಟೆಲ್‌ಗಳು, ತೋಟದ ಮನೆಗಳು, ಗಣಿಗಾರಿಕೆ ಪ್ರದೇಶಗಳು, ಕಲ್ಲು ಕ್ವಾರಿಗಳಲ್ಲಿ ಕೆಲಸ ಮಾಡುವವರನ್ನು ಸೂಕ್ಷ್ಮವಾಗಿ ಗಮನಿಸಿ ಮಾಹಿತಿ ಕಲೆ ಹಾಕಬೇಕು. ಅಂತಹ ಪ್ರದೇಶದಲ್ಲಿ ಜೀತಪದ್ಧತಿ ಆಚರಣೆ ಕಂಡು ಬಂದಲ್ಲಿ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.