ಹಾವೇರಿ: ಬಿಜೆಪಿ ಪಕ್ಷದ ತತ್ವ ಸಿದ್ದಾಂತಗಳಿಗೆ ಬದ್ಧರಾಗಿ ಕೆಲಸ ಮಾಡಿ. ಪಕ್ಷ ನಿಗದಿಪಡಿಸಿದ ಎಲ್ಲ ಕಾರ್ಯಕ್ರಮಗಳನ್ನು ಜವಾಬ್ದಾರಿಯಿಂದ ನಿಭಾಯಿಸಿ. ಮುಂದಿನ ಸ್ಥಳೀಯ ಚುನಾವಣೆಗಳಲ್ಲಿ ಪಕ್ಷ ಗುರುತಿಸಿದ ಅಭ್ಯರ್ಥಿಗಳನ್ನು ಗೆಲ್ಲಿಸುವಲ್ಲಿ ತಾವೆಲ್ಲರೂ ಪ್ರಾಮಾಣಿಕ ಪ್ರಯತ್ನ ಮಾಡಿ ಎಂದು ಬಿಜೆಪಿ ಮುಖಂಡ ಗವಿಸಿದ್ದಪ್ಪ ದ್ಯಾಮಣ್ಣನವರ ಹೇಳಿದರು.
ನಗರದ ಭಾರತೀಯ ಜನತಾ ಪಾರ್ಟಿ ಜಿಲ್ಲಾ ಕಾರ್ಯಾಲಯದಲ್ಲಿ ಗುರುವಾರ ಹಾವೇರಿ ನಗರ ಮಂಡಲದ ಎಸ್‌ಟಿ ಮೋರ್ಚಾ ಪದಾಧಿಕಾರಿಗಳ ಆಯ್ಕೆ ಸಭೆಯಲ್ಲಿ ಅವರು ಮಾತನಾಡಿದರು.
ಪಕ್ಷವನ್ನು ಬೂತ್ ಮಟ್ಟದಲ್ಲಿ ಗಟ್ಟಿಗೊಳಿಸಬೇಕು ಮತ್ತು ಎಸ್‌ಐಆರ್ ಪ್ರಕ್ರಿಯೆಯಲ್ಲಿ ತಾವೆಲ್ಲರೂ ಭಾಗವಹಿಸಬೇಕು. ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಬಿಟ್ಟು ಹೋಗದಂತೆ ನೋಡಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಶಹರ ಮಂಡಲದ ಅಧ್ಯಕ್ಷ ಕಿರಣ ಕೊಳ್ಳಿ ಪದಾಧಿಕಾರಿಗಳ ನೇಮಕ ಮಾಡಿ, ಆದೇಶ ಪ್ರತಿ ವಿತರಿಸಿದರು.
ಸಭಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಡಾ.ಸಂತೋಷ ಆಲದಕಟ್ಟಿ, ನೀಲಪ್ಪ ಚಾವಡಿ, ಮೃತ್ಯುಂಜಯ ಮುಷ್ಠಿ, ನಾಗರಾಜ ಹರಿಗೋಲ, ಬಾಲರಾಜ ಹೊನ್ನನಾಯಕ, ಅಲ್ಲಾಭಕ್ಷ ತಿಮ್ಮಾಪುರ, ಸಾಧಿಕ ಮುಜಾವರ, ಮರ್ದಾನಸಾಬ ಸುಳ್ಳಳ್ಳಿ, ಚಿಕ್ಕಪ್ಪ ದೊಡ್ಡತಳವಾರ, ಪದಾಧಿಕಾರಿಗಳು, ಇತರರು ಉಪಸ್ಥಿತರಿದ್ದರು.