ವೇದಿಕೆ ನಿರ್ಮಾಣ, ಹೆಲಿಪ್ಯಾಡ್ ನಿರ್ಮಾಣ, ವಾಹನಗಳ ನಿಲುಗಡೆ ಪ್ರದೇಶಗಳ ಸಿದ್ಧತೆ ಆರಂಭಿಸಲಾಗಿದೆ. ಕಾರ್ಯಕ್ರಮಕ್ಕೆ ಆಗಮಿಸುವ ಫಲಾನುಭವಿಗಳ, ಗಣ್ಯ ವ್ಯಕ್ತಿಗಳಿಗೆ ಸುಗಮ ಸಂಚಾರ, ವಾಹನ ವ್ಯವಸ್ಥೆ, ಆಸನ, ಊಟ, ಕುಡಿಯುವ ನೀರು, ಶೌಚಗೃಹ, ಸ್ವಚ್ಛತೆ, ತುರ್ತು ಆರೋಗ್ಯ ಚಿಕಿತ್ಸೆ ವ್ಯವಸ್ಥೆ ಸೇರಿದಂತೆ ಮೂಲ ಸೌಕರ್ಯವನ್ನು ಅತ್ಯಂತ ವ್ಯವಸ್ಥಿತವಾಗಿ ಮಾಡಬೇಕು ಎಂದು ಸೂಚಿಸಿದರು.