ಹಾವೇರಿ ಶಹರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಫೆಬ್ರವರಿ 16 ಹಾಗೂ ಜೂನ್ 27ರಂದು ಇದೇ ರೀತಿ ಹುಸಿ ಬಾಂಬ್ ಬೆದರಿಕೆ ಮೇಲ್ ಬಂದಿತ್ತು. ಮೂರನೇ ಬಾರಿಗೆ ಸೋಮವಾರ ಮತ್ತೆ ಇಂತಹ ಘಟನೆ ನಡೆದಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿದೆ. ಜಿಲ್ಲೆಯ ವಿವಿಧ ತಾಲೂಕುಗಳಿಂದ ಕೋರ್ಟ್‌ಗೆ ಆಗಮಿಸಿದ್ದ ರೈತರು, ಕಾರ್ಮಿಕರು, ಸಾರ್ವಜನಿಕರ ಸಮಯ ವ್ಯರ್ಥವಾಯಿತು. ಹಾಗಾಗಿ, ಸಂಬಂಧಪಟ್ಟ ಅಧಿಕಾರಿಗಳು ಆರೋಪಿತರನ್ನು ಬಂಧಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದರು.