ಹಾವೇರಿ: ರಸಗೊಬ್ಬರವನ್ನು ಅಕ್ರಮವಾಗಿ ದಾಸ್ತಾನು ಮಾಡಿ ಕೃತಕ ಅಭಾವ ಸೃಷ್ಟಿ ಮಾಡುವುದು, ನಿಗದಿಪಡಿಸಿದ ದರಕ್ಕಿಂತ ಹೆಚ್ಚಿನ ದರಕ್ಕೆ ಮಾರಾಟ ಮಾಡುವುದು, ಬಿಲ್ ನೀಡದೇ ಇರುವುದು, ಅವಧಿ ಮೀರಿದ ಕೃಷಿ ಪರಿಕರಗಳನ್ನು ವಿತರಣೆ ಮಾಡುವುದು ಕಂಡುಬಂದಲ್ಲಿ ಅಂತಹ ಮಾರಾಟಗಾರರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಹಾಗೂ ಪರವಾನಗಿ ರದ್ದು ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಗೊಬ್ಬರ ಮಾರಾಟಗಾರರಿಗೆ ಎಚ್ಚರಿಕೆ ನೀಡಿದರು.