ಹಾವೇರಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಜ.29ರಂದು; ಜಿಎಚ್ ಕಾಲೇಜ್‌ನಲ್ಲಿ ಆಯೋಜನೆ

udyoga mela
udyoga mela
Published on
ಹಾವೇರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕೌಶಲಾಭಿವೃದ್ಧಿ ಉದ್ಯಮಶೀಲತಾ ಮತ್ತು ಜೀವನೋಪಾಯ ಇಲಾಖೆ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಎನ್‌ಆರ್‌ಎಲ್‌ಎಂ ಸಂಜೀವಿನಿ, ದೀನದಯಾಳ ಉಪಾಧ್ಯಾಯ ಗ್ರಾಮೀಣ ಕೌಶಲ ಯೋಜನೆ ಸಹಯೋಗದಲ್ಲಿ ಜಿಲ್ಲಾಮಟ್ಟದ ಉದ್ಯೋಗ ಮೇಳ ಜ.29ರಂದು ಬೆಳಗ್ಗೆ 9.30ಕ್ಕೆ ನಗರದ ಜಿ.ಎಚ್.ಕಾಲೇಜ್ ಆವರಣದಲ್ಲಿ ಜರುಗಲಿದೆ.
ಮೇಳದಲ್ಲಿ ರಾಜ್ಯದ ಪ್ರತಿಷ್ಠಿತ ಕಂಪನಿಗಳು ಭಾಗಹಿಸುತ್ತಿವೆ. ಎಸ್.ಎಸ್.ಎಲ್.ಸಿ., ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ, ಐಟಿಐ, ಡಿಪ್ಲೋಮಾ, ಬಿಇ ಹಾಗೂ ಇತರೆ ಯಾವುದೇ ವಿದ್ಯಾರ್ಹತೆ ಹೊಂದಿದ 18ರಿಂದ 35 ವರ್ಷದೊಳಗಿನ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಹಾಗೂ ವಿಕಲಚೇತನ ಅಭ್ಯರ್ಥಿಗಳು ಉದ್ಯೋಗ ಮೇಳಕ್ಕೆ ಹಾಜರಾಗಬಹುದು. ಉದ್ಯೋಗ ಮೇಳದಲ್ಲಿ ಭಾಗವಹಿಸಲು ಯಾವುದೇ ಶುಲ್ಕ ಇರುವುದಿಲ್ಲ.
ಉದ್ಯೋಗ ಮೇಳದಲ್ಲಿ ಭಾಗವಹಿಸಲು ಅಭ್ಯರ್ಥಿಗಳು ಕ್ಯೂಆರ್ ಕೋಡ್ ನೋಂದಣಿ ಕಡ್ಡಾಯವಾಗಿದೆ. ಮೇಳಕ್ಕೆ ಆಗಮಿಸುವಾಗ ಅಭ್ಯರ್ಥಿಗಳು ಕನಿಷ್ಠ ಐದು ಬಯೋಡಾಟಾ ಪ್ರತಿಗಳು, ಆಧಾರ್ ಕಾರ್ಡ್ ಝರಾಕ್ಸ್ ಪ್ರತಿ ಕಡ್ಡಾಯವಾಗಿ ತರಬೇರಬೇಕು. ಹೆಚ್ಚಿನ ಮಾಹಿತಿಗಾಗಿ ಹಾವೇರಿ ಜಿಲ್ಲಾ ಪಂಚಾಯಿತಿ ಎನ್‌ಆರ್‌ಎಲ್‌ಎಂ ವಿಭಾಗ ಹಾಗೂ ಜಿಲ್ಲೆಯ ಎಲ್ಲ ತಾಲೂಕು ಪಂಚಾಯಿತಿ ಎನ್‌ಆರ್‌ಎಲ್‌ಎಂ ವಿಭಾಗ ಸಂಪರ್ಕಿಸಲು ಕೋರಲಾಗಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net