ಹಾವೇರಿ: ಇಲ್ಲಿನ ರೈಲ್ವೆ ನಿಲ್ದಾಣದ ಎದುರಿನ ತಹಸೀಲ್ದಾರ್ ಕಚೇರಿಯ ಅಟಲ್‌ಜಿ ಜನಸ್ನೇಹಿ ಕೇಂದ್ರಕ್ಕೆ ಮಂಗಳವಾರ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ದಿಢೀರ್ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ಸಾರ್ವಜನಿಕರು ಸಲ್ಲಿಸುವ ಅರ್ಜಿಗಳ ವಿಲೇವಾರಿಗಳನ್ನು ಕಾಲಮಿತಿಯೊಳಗೆ ಮಾಡಬೇಕು ಹಾಗೂ ಸಾರ್ವಜನಿಕರ ಸಮಸ್ಯೆಗಳನ್ನು ತಾಳ್ಮೆಯಿಂದ ಆಲಿಸಿ, ಸರಿಯಾದ ಮಾಹಿತಿ ನೀಡಬೇಕು ಎಂದು ಅಧಿಕಾರಿ ಹಾಗೂ ಸಿಬ್ಬಂದಿಗೆ ಸೂಚನೆ ನೀಡಿದರು.
ಕಚೇರಿಗೆ ಆಗಮಿಸಿದ ಸಾರ್ವಜನಿಕರ ಅಹವಾಲುಗಳನ್ನು ಸಮಚಿತ್ತದಿಂದ ಆಲಿಸಿದ ಜಿಲ್ಲಾಧಿಕಾರಿಗಳು, ಸಾರ್ವಜನಿಕರ ಅಹವಾಲುಗಳನ್ನು ಪರಿಶೀಲಿಸಿ ಸೂಕ್ತ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಉಪ ವಿಭಾಗಾಧಿಕಾರಿ ಕಲ್ಯಾಣಿ ಕಾಂಬ್ಳೆ, ತಹಸೀಲ್ದಾರ್ ಶರಣಮ್ಮ ಕೆ., ವಿಎ ಆನಂದ ದೇಸಾಯಿ, ಇತರರು ಉಪಸ್ಥಿತರಿದ್ದರು.
ಎಸ್.ಐ.ಆರ್.ಪರಿಶೀಲನೆ:
ತಹಸೀಲ್ದಾರ್ ಕಚೇರಿಯಲ್ಲಿ ಉಪ ವಿಭಾಗಾಧಿಕಾರಿ, ತಹಸೀಲ್ದಾರ್, ಬಿ.ಎಲ್.ಒ ಹಾಗೂ ಬಿ.ಎಲ್.ಎ.ಗಳೊಂದಿಗೆ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಕುರಿತು ಪರಿಶೀಲನೆ ನಡೆಸಿದರು. ಎಸ್.ಐ.ಆರ್. ಕಾರ್ಯವನ್ನು ಯಾವುದೇ ಲೋಪವಾಗದಂತೆ ಅತ್ಯಂತ ಜವಾಬ್ದಾರಿಯಿಂದ ಮಾಡಬೇಕು ಎಂದು ಸಲಹೆ ನೀಡಿದರು.