ನಗರದ ನಾಗೇಂದ್ರನಮಟ್ಟಿಯಲ್ಲಿರುವ ನೀರು ಶುದ್ಧೀಕರಣ ಘಟಕಕ್ಕೆ ಭೇಟಿ ನೀಡಿದ ಅವರು, ಘಟಕದ ನಿರ್ವಹಣೆ, ನೀರಿನ ಗುಣಮಟ್ಟ ಕಾಪಾಡುವ ಕ್ರಮಗಳು ಹಾಗೂ ವಿತರಣಾ ವ್ಯವಸ್ಥೆಯ ಕಾರ್ಯ ನಿರ್ವಹಣೆಯನ್ನು ಪರಿಶೀಲಿಸಿದರು. ಅಮೃತ 2.0 ಯೋಜನೆಯಡಿ ನಿರ್ಮಾಣವಾಗುತ್ತಿರುವ ನೀರಿನ ಟ್ಯಾಂಕ್‌ಗಳ ಕಾಮಗಾರಿ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು. ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಗುಣಮಟ್ಟದೊಂದಿಗೆ ಪೂರ್ಣಗೊಳಿಸುವಂತೆ ಸೂಚಿಸಿದರು.