ಹಾವೇರಿ: ನಗರದ ಕಾಗಿನೆಲೆ ರಸ್ತೆಯಲ್ಲಿ ಜಿಲ್ಲಾ ಕಾಂಗ್ರೆಸ್ ಭವನ ನಿರ್ಮಾಣಕ್ಕೆ ಭಾನುವಾರ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲರು ಭೂಮಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು. ಅಂದಾಜು 5 ಕೋಟಿ ರೂ. ವೆಚ್ಚದ ಮೂರು ಅಂತಸಿನ ಕಟ್ಟಡ ನಿರ್ಮಾಣವಾಗಲಿದೆ. ಗುದ್ದಲಿ ಪೂಜೆ ವೇಳೆ ಶಾಸಕರಾದ ರುದ್ರಪ್ಪ ಲಮಾಣಿ, ಸಲೀಂ ಅಹ್ಮದ್, ಬಸವರಾಜ ಶಿವಣ್ಣನವರ, ಯು.ಬಿ.ಬಣಕಾರ, ಯಾಸೀರ್‌ಖಾನ್ ಪಠಾಣ, ಸಂಜೀವಕುಮಾರ ನೀರಲಗಿ, ಆನಂದಸ್ವಾಮಿ ಗಡ್ಡದೇವರಮಠ, ಎಸ್.ಆರ್.ಪಾಟೀಲ, ಪ್ರೇಮಾ ಪಾಟೀಲ, ರಾಜು ಕುನ್ನೂರ, ಇತರರಿದ್ದರು.