

ಹಾವೇರಿ ಜಿಲ್ಲೆಯಲ್ಲಿ ಪ್ರತ್ಯೇಕ ಡಿಸಿಸಿ ಬ್ಯಾಂಕ್ ಸ್ಥಾಪಿಸುವಂತೆ ರೈತ ಸಂಘ ಹಲವು ವರ್ಷಗಳಿಂದ ಹೋರಾಟ ನಡೆಸುತ್ತ ಬಂದಿದೆ. ಇದೀಗ ಕೇಂದ್ರ ಸರ್ಕಾರ ಈ ಪ್ರಕ್ರಿಯೆಗೆ ಚಾಲನೆ ನೀಡಿರುವುದು ಸಂತಸದ ವಿಷಯವಾಗಿದೆ. ಇನ್ನುಮುಂದೆ ಆದರೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಆರೋಪ, ಪ್ರತ್ಯಾರೋಪ ಮಾಡುವುದನ್ನು ಬಿಡಬೇಕು. ಘೋಷಣೆ ಪತ್ರಕ್ಕೆ ಸೀಮಿತ ಆಗಬಾರದು. ರಾಜ್ಯ ಸರ್ಕಾರ ಈ ಬಜೆಟ್‌ನಲ್ಲೇ ಹಾವೇರಿಗೆ ಪ್ರತ್ಯೇಕ ಡಿಸಿಸಿ ಬ್ಯಾಂಕ್ ಘೋಷಿಸಿ, ಸ್ಥಾಪನೆಗೆ ಅಗತ್ಯ ಕ್ರಮ ಜರುಗಿಸಬೇಕು.
ಕೇಂದ್ರ ಸರ್ಕಾರದ ಸಹಕಾರ ಇಲಾಖೆ ಒಂದು ಜಿಲ್ಲೆ ಒಂದು ಡಿಸಿಸಿ ಬ್ಯಾಂಕ್ ಎಂಬ ನೀತಿ ಅಡಿಯಲ್ಲಿ ಕಾರ್ಯೋನ್ಮುಖವಾಗಲು ನಬಾರ್ಡ್‌ಗೆ ಸೂಚನೆ ನೀಡಿದೆ. 2025ರ ಅಕ್ಟೋಬರ್ 30ರಂದು ನಬಾರ್ಡ್ ಜನರಲ್ ಮ್ಯಾನೇಜರ್, ರಾಜ್ಯದ ಕೋ-ಆಪರೇಟಿವ್ ಸೊಸೈಟಿ ರಿಜಿಸ್ಟ್ರಾರ್‌ಗೆ ಪತ್ರ ಬರೆದಿದ್ದಾರೆ. ಧಾರವಾಡ, ಹಾವೇರಿ, ಗದಗ ಪ್ರತ್ಯೇಕ ಡಿಸಿಸಿ ಬ್ಯಾಂಕ್ ಮಾಡಲು ಕೂಡಲೇ ಕ್ರಮ ಜರುಗಿಉಸುವಂತೆ ಸೂಚಿಸಿದ್ದಾರೆ. ಆದರೆ, ರಾಜ್ಯ ಸರ್ಕಾರ ಈ ಬಗ್ಗೆ ತೀರ್ಮಾನ ಕೈಗೊಳ್ಳದಿರುವುದು ದುರದೃಷ್ಟಕರ. ಸಹಕಾರ ಮಂತ್ರಿಯೂ ಆಗಿರುವ ಸಿದ್ದರಾಮಯ್ಯ ಈ ಕೂಡಲೇ ಇದಕ್ಕೆ ಕ್ರಮ ಕೈಗೊಂಡು ಕೇಂದ್ರಕ್ಕೆ ಶಿಫಾರಸ್ಸು ಮಾಡಬೇಕು.