ಹಾವೇರಿ: ಮಹಿಳೆಯರಲ್ಲಿ ಕಂಡುಬರುವ ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟಲು ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ಮಾರ್ಗದರ್ಶನದಲ್ಲಿ ಮಾ.13ರಿಂದ ಜಿಲ್ಲೆಯ ಎಲ್ಲ ಆರೋಗ್ಯ ಸಂಸ್ಥೆಗಳಲ್ಲಿ ಎಚ್‌ಪಿವಿ ಲಸಿಕಾ ಅಭಿಯಾನ ಆರಂಭಿಸಲಾಗಿದೆ.
ಬ್ಯಾಡಗಿ ತಾಲೂಕಿನಲ್ಲಿ- 1,520, ಹಾನಗಲ್ಲ-2,804, ಹಾವೇರಿ-3,100, ಹಿರೇಕೆರೂರ-2,200, ರಾಣೆಬೆನ್ನೂರ- 3,630, ಸವಣೂರ- 1,800 ಹಾಗೂ ಶಿಗ್ಗಾಂವಿ ತಾಲೂಕಿನ 1,900 ಹೆಣ್ಣು ಮಕ್ಕಳು ಸೇರಿದಂತೆ 16,954 ಮಕ್ಕಳನ್ನು ಲಸಿಕೆಗೆ ಗುರುತಿಸಲಾಗಿದೆ.
ಈ ಅಭಿಯಾನದಲ್ಲಿ 14 ವರ್ಷ ಪೂರ್ಣಗೊಂಡು 15 ವರ್ಷದೊಳಗಿನ ಹೆಣ್ಣು ಮಕ್ಕಳಿಗೆ ಒಂದು ಡೋಸ್ ಎಚ್‌ಪಿವಿ ಲಸಿಕೆಯನ್ನು ಜಿಲ್ಲೆಯ ಆರೋಗ್ಯ ಸಂಸ್ಥೆಗಳಲ್ಲಿ ಉಚಿತವಾಗಿ ನೀಡಲಾಗುತ್ತಿದೆ. ಹೆಣ್ಣು ಮಕ್ಕಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಂ.ಜಯಾನಂದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.