ರೂಪಾ ಶೌಚಕ್ಕೆ ಹೋಗುವಾಗ ಮಾರ್ಗಮಧ್ಯೆ ಕಾರಿಡಾರ್‌ನಲ್ಲೇ ಹೆರಿಗೆ ಸಂಭವಿಸಿ, ಮಗು ಜನಿಸಿತ್ತು. ಮಗು ನೆಲದ ಮೇಲೆ ಬಿದ್ದು, ತಲೆಗೆ ಪೆಟ್ಟಾಗಿ ಮೃತಪಟ್ಟಿದೆ. ಆಸ್ಪತ್ರೆ ವೈದ್ಯರು ಹಾಗೂ ಸಿಬ್ಬಂದಿ ನಿರ್ಲಕ್ಷೃವೇ ಇದಕ್ಕೆ ಕಾರಣ ಎಂದು ರೂಪಾಳ ಕುಟುಂಬಸ್ಥರು ಆರೋಪಿಸಿದ್ದರು. ಸಮಯಕ್ಕೆ ಸರಿಯಾಗಿ ಸೂಕ್ತ ವ್ಯವಸ್ಥೆ ಕಲ್ಪಿಸಿದ್ದರೆ ಈ ದುರ್ಘಟನೆ ಸಂಭವಿಸುತ್ತಿರಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.