ಹಾವೇರಿ ಜಿಲ್ಲಾ ಸರ್ಕಾರಿ ನೌಕರರ ಕ್ರೀಡಾಕೂಟ 9ರಿಂದ

Govt, Employees, Sports
Govt, Employees, Sports
Published on
ಹಾವೇರಿ: ಕ್ರೀಡೆಯಲ್ಲಿ ಸೋಲು- ಗೆಲವು ಮುಖ್ಯವಲ್ಲ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ. ಹೀಗಾಗಿ, ಜಿಲ್ಲೆಯ ಎಲ್ಲ ನೌಕರರು ಕ್ರೀಡಾಕೂಟದಲ್ಲಿ ಪಾಲ್ಗೊಂಡು ಕ್ರೀಡಾ ಹಿರಿಮೆ ಹೆಚ್ಚಿಸಿ ಎಂದು ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಹೇಳಿದರು.
ನಗರದ ಜಿಲ್ಲಾಧಿಕಾರಿಯವರ ಕಾರ್ಯಾಲಯದ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಜಿಲ್ಲಾಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, 2025-26ನೇ ಸಾಲಿನ ಕ್ರೀಡಾಕೂಟಕ್ಕೆ ಜಿಲ್ಲೆಯಿಂದ 1,800 ನೌಕರರು ವಿವಿಧ 40 ಕ್ರೀಡೆಗಳಿಗೆ ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದಾರೆ. ಕ್ರೀಡೆಗಳನ್ನು ಅಚ್ಚುಕಟ್ಟಾಗಿ ನಿಯೋಜಿಸಿ. ಯಾವುದೇ ಗೊಂದಲಗಳಿಗೆ ಒಳಗಾಗದೇ, ಅನವಶ್ಯಕವಾಗಿ ಖರ್ಚು ವೆಚ್ಚಗಳನ್ನು ಮಾಡದೇ, ಅಗತ್ಯಕ್ಕೆ ಅನುಗುಣವಾಗಿ ಅನುದಾನ ಬಳಿಸಿಕೊಂಡು ಕ್ರೀಡಾಕೂಟ ಆಯೋಜಿಸಿ ಎಂದರು.
ಕ್ರೀಡಾಕೂಟದಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ ಜ.9ರಂದು ಓಓಡಿ ರಜೆ ಮಂಜೂರು ಮಾಡಿ ಅನುಕೂಲ ಮಾಡಿಕೊಡುವುದಾಗಿ ಸೂಚಿಸಿದರು. ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವ ಕ್ರೀಡಾಪಟುಗಳಿಗೆ ಟಿ ಶರ್ಟ್ ಮತ್ತು ಕುಡಿಯುವ ನೀರು, ಉಟೋಪಚಾರದ ವ್ಯವಸ್ಥೆ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಕರ್ನಾಟಕ ರಾಜ್ಯ ನೌಕರರ ಸಂಘ ಜಿಲ್ಲಾ ಶಾಖೆ ಹಾವೇರಿ ಅಧ್ಯಕ್ಷ ಮಲ್ಲೇಶ ಕರಿಗಾರಿ, ಯುವ ಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಲತಾ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net