ಬೆಳಗ್ಗೆ 10 ಗಂಟೆಗೆ ಬೆಂಗಳೂರು ಎಚ್‌ಎಎಲ್ ವಿಮಾನ ನಿಲ್ದಾಣದಿಂದ ಹೊರಟು, ಬೆಳಗ್ಗೆ 11 ಗಂಟೆಗೆ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸುವರು. ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಬೆಳಗ್ಗೆ 11.40ಕ್ಕೆ ಹಾವೇರಿಯ ಕೆಎಲ್‌ಇ ಸಂಸ್ಥೆಯ ಕೊಳ್ಳಿ ಪಾಲಿಟೆಕ್ನಿಕ್ ಮೈದಾನದ ಹೆಲಿಪ್ಯಾಡ್‌ಗೆ ಆಗಮಿಸಲಿದ್ದಾರೆ. ಮೊದಲಿಗೆ ಹಾವೇರಿ ನಗರದ ಹುಕ್ಕೇರಿ ಮಠಕ್ಕೆ ಭೇಟಿ ನೀಡಿ, ಉಭಯ ಶ್ರೀಗಳ ಗದ್ದುಗೆ ಹಾಗೂ ಶ್ರೀ ಸದಾಶಿವ ಸ್ವಾಮೀಜಿ ಅವರನ್ನು ಭೇಟಿ ಮಾಡಲಿದ್ದಾರೆ.