ಹೊಸರಿತ್ತಿಯಲ್ಲಿ ಗುದ್ಲೆಪ್ಪ ಹಳ್ಳಿಕೇರಿ ಜಯಂತ್ಯುತ್ಸವ 6ರಂದು

Haveri, Hosaritti, Gandhi Gurukula, Gudleppa Hallikeri, Birthday,
Haveri, Hosaritti, Gandhi Gurukula, Gudleppa Hallikeri, Birthday,
Published on
ಹಾವೇರಿ: ಹಿರಿಯ ಗಾಂಧಿವಾದಿ, ಕರ್ನಾಟಕ ಉಕ್ಕಿನ ಮನುಷ್ಯ ಗುದ್ಲೆಪ್ಪ ಹಳ್ಳಿಕೇರಿಯವರ 121ನೇ ಜಯಂತ್ಯುತ್ಸವ ಹಾಗೂ ಗುದ್ಲೆಪ್ಪ ಹಳ್ಳಿಕೇರಿ ಸೇವಾಗೌರವ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಜೂನ್ 6ರಂದು ತಾಲೂಕಿನ ಹೊಸರಿತ್ತಿ ಗಾಂಧಿ ಗ್ರಾಮೀಣ ಗುರುಕುಲದಲ್ಲಿ ಹಮ್ಮಿಕೊಳ್ಳಲಾಗಿದೆ.
ಮಹಾತ್ಮ ಗಾಂಧೀಜಿ ಅವರ ತತ್ವದ ಅಡಿಯಲ್ಲಿ ನಡೆಯುತ್ತಿರುವ ಅಪರೂಪದ ಗುರುಕುಲದಲ್ಲಿ ಸಮಾರಂಭ ಜರುಗಲಿದೆ. ನಿವೃತ್ತ ಪೊಲೀಸ್ ವರಿಷ್ಠಾಧಿಕಾರಿ ವಿಜಯಕುಮಾರ ಬಿಸನಳ್ಳಿ ಅವರಿಗೆ ಪ್ರಸಕ್ತ ಸಾಲಿನ ‘ಶ್ರೀ ಗುದ್ಲೆಪ್ಪ ಹಳ್ಳಿಕೇರಿ ಸೇವಾ ಗೌರವ ಪ್ರಶಸ್ತಿ’ ನೀಡಿ ಗೌರವಿಸಲಾಗುವುದು. 25,000 ರೂ. ನಗದು ಬಹುಮಾನ, ಪ್ರಶಸ್ತಿ ಫಲಕ, ಪ್ರಶಸ್ತಿ ಪತ್ರ ನೀಡಿ ಸನ್ಮಾನಿಸಲಾಗುವುದು. ಬಳಿಕ ಗುದ್ಲೆಪ್ಪ ಹಳ್ಳಿಕೇರಿ ಅವರ ಫೋಟೋ ಗ್ಯಾಲರಿ ವೀಕ್ಷಣೆ ಮಾಡಲಾಗುವುದು.
ಸಮಾರಂಭದಲ್ಲಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎ.ಎಂ.ಖಾನ್, ಹುಬ್ಬಳ್ಳಿಯ ಹಿರಿಯ ಪತ್ರಕರ್ತ ರಾಹುಲ ಬೆಳಗಲಿ, ಕಸಾಪ ಧಾರವಾಡ ಜಿಲ್ಲಾಧ್ಯಕ್ಷ ಡಾ.ಲಿಂಗರಾಜ ಅಂಗಡಿ, ಇತರರು ಭಾಗವಹಿಸುವರು. ವಿಶ್ರಾಂತ ಪ್ರಾಧ್ಯಾಪಕ ಪ್ರೊ.ಕೆ.ಎಸ್.ಕೌಜಲಗಿ ಅವರು ಗುದ್ಲೆಪ್ಪ ಹಳ್ಳಿಕೇರಿ ಅವರಿಗೆ ನುಡಿನಮನ ಸಲ್ಲಿಸುವರು. ಗಾಂಧಿ ಗುರುಕುಲ ಹಾಗೂ ರಾಷ್ಟ್ರೀಯ ಶಿಕ್ಷಣ ಸಮಿತಿಯ ಎಸ್‌ಎಸ್‌ಎಲ್‌ಸಿ, ಪಿಯುಸಿ ಹಾಗೂ ಪದವಿ ಪರೀಕ್ಷೆಗಳಲ್ಲಿ ಹೆಚ್ಚು ಅಂಕ ಗಳಿಸಿದ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುವುದು ಎಂದು ಪ್ರತಿಷ್ಠಾನದ ಸಂಸ್ಥಾಪಕ ಧರ್ಮದರ್ಶಿ ವೀರಣ್ಣ ಚಕ್ಕಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net