ಮನುಷ್ಯನ ಆಸೆಗೆ ಮಿತಿಯಿಲ್ಲ, ಮನುಷ್ಯ ತಾನು ಸುಖವಾಗಿರಲು ಎಲ್ಲ ಪಾಪ ಕೃತ್ಯಗಳನ್ನು ಮಾಡಲು ಹಿಂಜರಿಯುವುದಿಲ್ಲ. ಸಮಾಜದಲ್ಲಿ ಹಿಂದಿನಿಂದಲೂ ಸಣ್ಣ ಮಕ್ಕಳಿಂದ ಹಿಡಿದು ವಯಸ್ಕ ಹೆಣ್ಣು ಮಕ್ಕಳು ಹಾಗೂ ಗಂಡು ಮಕ್ಕಳು ಹಾಗೂ ವೃದ್ಧರು ಅಮಿಷಕ್ಕೆ ಹೆಚ್ಚು ಬಲಿಯಾಗುತ್ತಿದ್ದಾರೆ. ಹಾಗಾಗಿ, ಮಾನವ ಕಳ್ಳ ಸಾಗಾಣಿಕೆ ತಡೆ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವ ಮೂಲಕ ಅಂಹತ ಕೃತ್ಯಗಳನ್ನು ತಡೆಯಲು ಮುಂದಾಗಬೇಕು. ಕಾನೂನು ನೆರವಿಗಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸಂಪರ್ಕಿಸಬಹುದು ಎಂದು ಹೇಳಿದರು.