25 ಲಕ್ಷ ವೆಚ್ಚದಲ್ಲಿ ಕನಕದಾಸರ ಪುತ್ಥಳಿ ಪ್ರತಿಷ್ಠಾಪನೆ; ಹಾವೇರಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಎಸ್.ಎಫ್.ಎನ್ ಗಾಜೀಗೌಡ್ರ

Haveri, Kaginele Swamiji, Kaginele Circle, Statue,
Haveri, Kaginele Swamiji, Kaginele Circle, Statue,
Published on
ಹಾವೇರಿ: ಒಂದು ತಿಂಗಳ ಅವಧಿಯಲ್ಲಿ 25 ಲಕ್ಷ ರೂ. ವೆಚ್ಚದಲ್ಲಿ ನಗರದ ಕಾಗಿನೆಲೆ ರಸ್ತೆಯ ಕನಕದಾಸ ವೃತ್ತವನ್ನು ಅಭಿವೃದ್ಧಿಪಡಿಸಿ, ದಾಸಶ್ರೇಷ್ಠ ಕನಕದಾಸರ ಪುತ್ಥಳಿ ಪ್ರತಿಷ್ಠಾಪಿಸಲಾಗುವುದು ಎಂದು ಹಾವೇರಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಎಸ್.ಎಫ್.ಎನ್ ಗಾಜೀಗೌಡ್ರ ತಿಳಿಸಿದರು.
ನಗರದ ಪ್ರವಾಸಿ ಮಂದಿರದಲ್ಲಿ ಭಾನುವಾರ ಕಾಗಿನೆಲೆ ಶ್ರೀ ಕನಕ ಗುರುಪೀಠದ ಜಗದ್ಗುರು ಶ್ರೀ ನಿರಂಜನಾನಂದಪುರಿ ಸ್ವಾಮೀಜಿಯವರ ನೇತೃತ್ವದಲ್ಲಿ ಆಯೋಜಿಸಿದ್ದ ಸಮಾಲೋಚನಾ ಸಭೆಯಲ್ಲಿ ಅವರು ಮಾತನಾಡಿದರು.
ಕನಕದಾಸ ವೃತ್ತದ ಅಭಿವೃದ್ದಿಗಾಗಿ ನಗರಾಭಿವೃದ್ದಿ ಪ್ರಾಧಿಕಾರದಿಂದ 25 ಲಕ್ಷ ರೂ. ಅನುದಾನ ಖರ್ಚು ಮಾಡಲಾಗುವುದು. ಕನಕದಾಸರ ಮೂರ್ತಿಗೆ ನಗರದ ಗಣ್ಯರು, ಸಮಾಜದ ಮುಖಂಡರು ಸಹಾಯ ಮಾಡಲಿದ್ದಾರೆ ಎಂದರು.
ಈಗಾಗಲೇ ಹೆಸ್ಕಾಂ ಅಧಿಕಾರಿಗಳು, ಲೋಕೊಪಯೋಗಿ ಇಲಾಖೆಯ ಅಧಿಕಾರಿಗಳು, ನಗರಸಭೆ ಅಧಿಕಾರಿಗಳು ಮತ್ತು ನಗರಾಭಿವೃದ್ಧಿ ಪ್ರಾಧಿಕಾರದ ಇಂಜಿನಿಯರ್‌ಗಳು ಕನಕದಾಸರ ವೃತ್ತ ಮತ್ತು ಮೂರ್ತಿ ಪ್ರತಿಷ್ಠಾಪನೆ ಮಾಡುವ ಸ್ಥಳವನ್ನು ಪರಿಶೀಲನೆ ಮಾಡಿದ್ದಾರೆ. ಮೂರ್ತಿ ಪ್ರತಿಷ್ಠಾನೆಗೆ ಶ್ರೀಕನಕದ ಕುರಿ ಮತ್ತು ಉಣ್ಣೆ ನೇಕಾರರ ಸಹಕಾರಿ ಸಂಘದವರು ಅಗತ್ಯ ಜಾಗವನ್ನು ಬಿಟ್ಟು ಕೊಡಲು ಒಪ್ಪಿಗೆ ಸೂಚಿಸಿದ್ದಾರೆ ಎಂದರು.
ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಂಜೀವಕುಮಾರ ನಿರಲಗಿ, ಅಪರ ಜಿಲ್ಲಾಧಿಕಾರಿ ಡಾ.ನಾಗರಾಜ ಎಲ್., ಪತ್ರಕರ್ತ ನಿಂಗಪ್ಪ ಚಾವಡಿ, ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net