ಶ್ರೀನಿವಾಸ ಮಾನೆಗೆ ಸಚಿವ ಸ್ಥಾನ ಕೊಡಿ; ಸಿಎಂ, ಕೆಪಿಸಿಸಿಗೆ ಮರಾಠ ಸಮಾಜದ ಒತ್ತಾಯ

Haveri, Maratha Samaj, Forced, Ministership, To MLA Shrinivas Mane,
Haveri, Maratha Samaj, Forced, Ministership, To MLA Shrinivas Mane,
Published on
ಹಾವೇರಿ: ಮರಾಠ ಸಮಾಜದ ಮುಖಂಡ, ಎಲ್ಲ ಸಮುದಾಯಗಳೊಂದಿಗೆ ಉತ್ತಮ ಬಾಂಧವ್ಯ ಹೊಂದಿರುವ ಹಾನಗಲ್ಲ ಶಾಸಕ ಶ್ರೀನಿವಾಸ ಮಾನೆ ಅವರಿಗೆ ಈ ಬಾರಿ ಸಚಿವ ಸ್ಥಾನ ನೀಡುವಂತೆ ಹಾವೇರಿ ಜಿಲ್ಲಾ ಹಾಗೂ ತಾಲೂಕು ಕ್ಷತ್ರೀಯ ಮರಾಠ ಸಮಾಜ ಮನವಿ ಮಾಡಿದೆ.
ಮಾನೆ ಅವರು ಈಗಾಗಲೇ ಎರಡು ಬಾರಿ ವಿಧಾನ ಪರಿಷತ್ ಸದಸ್ಯರಾಗಿ, ಎರಡು ಬಾರಿ ಹಾನಗಲ್ಲ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಜನಸೇವೆಯ ಮೂಲಕ ಸದಾ ಜನರ ಹತ್ತಿರ ಇರುತ್ತಾರೆ. ಕರೊನಾ ಸಂಕಷ್ಟದ ಸಂದರ್ಭದಲ್ಲಿ ಆಪದ್ಬಾಂದವ ಯೋಜನೆ ಅಡಿಯಲ್ಲಿ ಉಚಿತವಾಗಿ ಅಂಬುಲೆನ್ಸ್ ಸೇವೆ ನೀಡಿ ಮನೆ ಮಾತಾಗಿದ್ದರು.
ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಉಪಚುನಾವಣೆಯಲ್ಲಿ ಇಡೀ ಸರ್ಕಾರದ ಆಡಳಿತ ಯಂತ್ರವೇ ಎದುರಾದರೂ ಮಾನೆ ಗೆಲುವು ಸಾಧಿಸಿದ್ದಾರೆ. ಇತರ ಹಲವು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗಾಗಿ ಶ್ರಮಿಸಿದ್ದಾರೆ. ಹಾಗಾಗಿ, ಈ ಬಾರಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಸಚಿವ ಸಂಪುಟದಲ್ಲಿ ಮಾನೆ ಅವರನ್ನು ಪರಿಗಣಿಸಬೇಕು ಎಂದು ಸಮಾಜದ ಜಿಲ್ಲಾಧ್ಯಕ್ಷ ಉಮೇಶ ವಾಘ, ತಾಲೂಕು ಅಧ್ಯಕ್ಷ ದೇವರಾಜ ಗುಂಡೆ ಪ್ರಕಟಣೆ ಮೂಲಕ ಒತ್ತಾಯಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net