

ಪ್ರಮುಖ ಮುಖ್ಯಾಂಶಗಳು
ಕಷ್ಟಪಟ್ಟು ಬೆಳೆದ ಬೆಳೆಗಳಿಗೆ ಯೋಗ್ಯ ಬೆಲೆ ಬರದಿದ್ದರೆ ಬದುಕು ಕಷ್ಟವಾಗುತ್ತದೆ. ನಾವೂ ಕೇಂದ್ರಕ್ಕೆ ಸಹಕಾರ ಕೊಡುತ್ತೇವೆ. ಸದ್ಯಕ್ಕೆ ಎಥೆನಾಲ್ ಖರೀದಿಸದಂತೆ ಕೇಂದ್ರ ಸರ್ಕಾರ ತಾತ್ಕಾಲಿಕವಾಗಿ ತಡೆದು, ಮಾರ್ಗಸೂಚಿ ಹೊರಡಿಸಬೇಕು. ಮೆಕ್ಕೆಜೋಳ ಬೆಳೆಗಾರರ ಸಮಸ್ಯೆ ಇತ್ಯರ್ಥಕ್ಕೆ ಕ್ಯಾಬಿನೇಟ್‌ನಲ್ಲಿಯೂ ಚರ್ಚಿಸಲಾಗುವುದು. ಬಿಜೆಪಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಸಂಸದ ಬಸವರಾಜ ಬೊಮ್ಮಾಯಿ ಅವರು ಈ ಬಗ್ಗೆ ದಿನಾಂಕ ನಿಗದಿಪಡಿಸಲಿ. ರಾಜ್ಯದ ನಿಯೋಗದೊಂದಿಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ರಾಜ್ಯ ಸರ್ಕಾರ ಸಿದ್ಧವಿದೆ.