ಹಾವೇರಿ: ಶೋಷಿತ ಸಮುದಾಯದ ಧ್ವನಿಯಾಗಿರುವ ಹುಬ್ಬಳ್ಳಿ-ಧಾರವಾಡ ಪೂರ್ವ ಕ್ಷೇತ್ರದ ಶಾಸಕ ಪ್ರಸಾದ ಅಬ್ಬಯ್ಯ ಅವರಿಗೆ ಡಿ.ಕೆ.ಶಿವಕುಮಾರ ನೇತೃತ್ವದ ಸಚಿವ ಸಂಪುಟದಲ್ಲಿ ಕ್ಯಾಬಿನೆಟ್ ದರ್ಜೆಯ ಸ್ಥಾನಮಾನ ನೀಡಬೇಕು ಎಂದು ಬಳ್ಳಾರಿಯ ಬುದ್ಧ ವಿಹಾರದ ಕಮಲರತ್ನ ಬಂತೇಜಿ ಸರ್ಕಾರಕ್ಕೆ ಒತ್ತಾಯಿಸಿದರು.
ಇಲ್ಲಿಯ ರಾಜೇಂದ್ರ ನಗರದ ಅಶೋಕ ಮೌರ್ಯ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದ ಅವರು, ಶಾಸಕ ಪ್ರಸಾದ ಅಬ್ಬಯ್ಯ ಸತತ ಮೂರು ಬಾರಿ ಆಯ್ಕೆಯಾಗಿದ್ದಾರೆ. ಬಿಜೆಪಿ ಭದ್ರಕೋಟೆ ಧಾರವಾಡ ಜಿಲ್ಲೆಯಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದಾರೆ.
ಕಳೆದ ಲೋಕಸಭೆ ಚುನಾವಣೆಯಲ್ಲಿ ಮುಂಬೈ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ದುಡಿಯುವ ಮೂಲಕ ಶೇಕಡಾವಾರು ಮತದಾನ ಹೆಚ್ಚಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಹಾಗಾಗಿ, ಸರ್ವಜನಾಂಗದ ಹಿತ ಕಾಯುವ ಶಾಸಕ ಪ್ರಸಾದ ಅಬ್ಬಯ್ಯರಿಗೆ ಮಂತ್ರಿ ಸ್ಥಾನ ನೀಡಬೇಕು ಎಂದು ಕಾಂಗ್ರೆಸ್‌ನ ಹೈಕಮಾಂಡ್‌ಗೆ ಒತ್ತಾಯಿಸಿದರು.