ಜಿಲ್ಲೆಯ ಶಾಸಕರಾದ ರುದ್ರಪ್ಪ ಲಮಾಣಿ, ಬಸವರಾಜ ಶಿವಣ್ಣನವರ, ಪ್ರಕಾಶ ಕೋಳಿವಾಡ, ಯಾಸೀರ್‌ಖಾನ್ ಪಠಾಣ ಹಾಗೂ ಕಾಂಗ್ರೆಸ್ ಸಮಿತಿ ಜಿಲ್ಲಾಧ್ಯಕ್ಷ ಸಂಜೀವಕುಮಾರ ನೀರಲಗಿ ಈಗಾಗಲೇ ದೆಹಲಿಗೆ ತೆರಳಿ, ಹೈಕಮಾಂಡ್ ಬಳಿ ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ. ಜಿಲ್ಲೆಯ ಆರಕ್ಕೆ ಆರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಬಾವುಟ ಹಾರಿಸಿದ್ದು, ಈ ಸಲ ಕನಿಷ್ಠ ಎರಡು ಸಚಿವ ಸ್ಥಾನಕ್ಕಾಗಿ ಒತ್ತಡ ಹೇರುತ್ತಿದ್ದಾರೆ ಎನ್ನಲಾಗಿದೆ.