ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ ತಮಗೆ ಈ ಬಾರಿ ಎಂಎಲ್‌ಸಿ ಸ್ಥಾನ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ. ಬಿಜೆಪಿ ಜಿಲ್ಲಾಧ್ಯಕ್ಷರಾಗಿ, ವಿಧಾನ ಪರಿಷತ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದ ಪಂಚಮಸಾಲಿ ಸಮಾಜದ ಮುಖಂಡ ಬೇವಿನಮರದ ಆಂತರಿಕ ಕಾರಣಗಳಿಂದ 2019ರಲ್ಲಿ ಬಿಜೆಪಿ ತೊರೆದು, ಕಾಂಗ್ರೆಸ್ ಕೈ ಹಿಡಿದರು. 2023ರ ಶಿಗ್ಗಾಂವ ಚುನಾವಣೆ, ಉಪಚುನಾವಣೆಯಲ್ಲಿ ಟಿಕೆಟ್ ತ್ಯಾಗ ಮಾಡಿ, ಪಕ್ಷ ಸಂಘಟನೆಯಲ್ಲಿ ನಿರತರಾಗಿದ್ದರು. ಹೈಕಮಾಂಡ್ ನೀಡಿದ್ದ ಭರವಸೆಯಂತೆ ಇದೀಗ ಎಂಎಲ್‌ಸಿ ಸ್ಥಾನ ನೀಡಬೇಕು ಎಂಬ ಕೂಗು ಕೇಳಿ ಬಂದಿದೆ.