ಹಾವೇರಿ: ನಗರದ ಸಿಂಧಗಿ ಮಠ ಕ್ರಾಸ್ ಸಹಕಾರಿ ಯೂನಿಯನ್ ಕಚೇರಿ ಆವರಣದಲ್ಲಿ ನೂತನವಾಗಿ ಪ್ರಾರಂಭಿಸಿರುವ ಹೈಟೆಕ್ ನಂದಿನಿ ಪಾರ್ಲರ್ ಅನ್ನು ಹಾವೇರಿ ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷ ಮಂಜನಗೌಡ ಪಾಟೀಲ ಸೋಮವಾರ ಉದ್ಘಾಟಿಸಿದರು. ಹಾವೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಎಫ್.ಎನ್. ಗಾಜಿಗೌಡ್ರ, ಒಕ್ಕೂಟದ ಉಪಾಧ್ಯಕ್ಷ ಉಜ್ಜನಗೌಡ ಮಾವಿನತೋಪ, ನಿರ್ದೇಶಕರಾದ ಬಸವೇಶ್ವರಗೌಡ ಪಾಟೀಲ, ಪ್ರಕಾಶ ಬನ್ನಿಹಟ್ಟಿ, ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕ ಪ್ರದೀಪ ಎಸ್.ಎಂ., ಸಹಕಾರಿ ಯೂನಿಯನ್ ಅಧ್ಯಕ್ಷ, ಆಡಳಿತ ಮಂಡಳಿ ಸದಸ್ಯರು, ಸಿಬ್ಬಂದಿ, ಇತರರಿದ್ದರು.