ನರೇಗಾ ಯೋಜನೆಯಿಂದ ಬಡ ಕೂಲಿ ಕಾರ್ಮಿಕರಿಗೆ ಉದ್ಯೋಗ ಖಾತ್ರಿ ನೀಡುವುದರ ಜತೆಗೆ ವಲಸೆ ಹೋಗುವುದನ್ನು ತಡೆಗಟ್ಟಲಾಗುತ್ತಿದೆ. ನರೇಗಾ ಯೋಜನೆ ಕೂಲಿಬೇಡಿಕೆ ಆಧಾರಿತ ಕಾರ್ಯಕ್ರಮವಾಗಿದೆ. ಸ್ಥಳೀಯವಾಗಿ ಗ್ರಾಮ ಪಂಚಾಯಿತಿ ಮೂಲಕ ನರೇಗಾ ಯೋಜನೆ ಅಡಿ ಕೂಲಿ ಕೆಲಸ ನೀಡಲಾಗುವುದು. ಯೋಜನೆ ಅಡಿಯಲ್ಲಿ ವೈಯಕ್ತಿಕ ಕಾಮಗಾರಿಗಳಾದ ರೇಷ್ಮೆ ಕೃಷಿ, ಕೃಷಿ ಹೊಂಡ, ಬದು ನಿರ್ಮಾಣ, ತೆಂಗು, ಪೇರಲ, ಗುಲಾಬಿ ಕೃಷಿ, ದನದ ಕೊಟ್ಟಿಗೆ ನಿರ್ಮಾಣ, ಇತ್ಯಾದಿ ಕಾಮಗಾರಿಗಳನ್ನು ಮಾಡಿಕೊಳ್ಳಲು ಅವಕಾಶವಿದೆ ಎಂದರು.