ಬೆಂಗಳೂರಿನ ಸದಾಶಿವನಗರದಲ್ಲಿನ ಡಿ.ಕೆ.ಶಿವಕುಮಾರ ನಿವಾಸಕ್ಕೆ ಶುಕ್ರವಾರ ರಾತ್ರಿ ಜಿಲ್ಲೆಯ ಶಾಸಕರಾದ ಶ್ರೀನಿವಾಸ ಮಾನೆ, ಪ್ರಕಾಶ ಕೋಳಿವಾಡ ಹಾಗೂ ಯಾಸೀರ್‌ಖಾನ್ ಪಠಾಣ ಮತ್ತು ಕಾಂಗ್ರೆಸ್ ಮುಖಂಡ ಆನಂದಸ್ವಾಮಿ ಗಡ್ಡದೇವರಮಠ ಭೇಟಿ ನೀಡಿ, ವಿವಿಧ ವಿಷಯಗಳ ಕುರಿತು ಚರ್ಚಿಸಿದ್ದರು. ಸಿಎಂ ಬದಲಾವಣೆಯ ಬಿರುಗಾಳಿ ಬೀಸಿರುವ ಸಂದರ್ಭದಲ್ಲೇ ಮೂವರು ಶಾಸಕರು ಪ್ರತ್ಯೇಕವಾಗಿ ಭೇಟಿ ನೀಡಿರುವುದು ಚರ್ಚೆಗೆ ಗ್ರಾಸವಾಗಿದೆ. ಜಿಲ್ಲೆಯ ಆರು ಶಾಸಕರ ಪೈಕೆ ಯಾರು ಸಿಎಂ ಸಿದ್ದರಾಮಯ್ಯ ಬಣ ? ಯಾರು ಡಿಸಿಎಂ ಡಿ.ಕೆ.ಶಿವಕುಮಾರ ಬಣ ? ಯಾರಿಗೆ ಒಲಿಯಲಿದೆ ಸಚಿವ ಸ್ಥಾನ ? ಎಂಬ ಲೆಕ್ಕಾಚಾರ ಶುರುವಾಗಿದೆ.