ಸಾರ್ವಜನಿಕರು ಕಂದಾಯ ಇಲಾಖೆಯಿಂದ ದಾಖಲೆ ಪಡೆಯುವ ಪ್ರಕ್ರಿಯೆಯನ್ನು ಸರಳೀಕರಣಗೊಳಿಸಲಾಗಿದೆ. ಮೃತರ ವಾರಸಾ ಬದಲಾವಣೆ, ಕೃಷಿ ಭೂಮಿಗೆ ಆಧಾರ್ ಜೋಡಣೆ, ಭೂದಾಖಲೆ ಡಿಜಿಟಲೀಕರಣ, ಆರ್‌ಟಿಸಿ ತಿದ್ದುಪಡಿ, ದರಖಾಸ್ತ ಕೆಲಸ, ಪೌತಿ ಖಾತೆ ಸೇರಿದಂತೆ ವಿವಿಧ ಕೆಲಸಗಳು ವೇಗವಾಗಿ ನಡೆಯಬೇಕು. ಈ ಕಾರ್ಯಗಳಲ್ಲಿ ಏನೇ ಸಮಸ್ಯೆಗಳಿದ್ದಲ್ಲಿ ಸಂಬಂಧಟ್ಟವರೊಂದಿಗೆ ಚರ್ಚಿಸಿ ಬಗೆಹರಿಸಿಕೊಳ್ಳಬೇಕು. ಭೂದಾಖಲೆ ಡಿಜಿಟಲೀಕರಣಕ್ಕೆ ಅನವಶ್ಯಕ ದಾಖಲೆಗಳನ್ನು ಸ್ಕ್ಯಾನ್ ಮಾಡಬೇಡಿ. ಕೆಟಗರಿ ಎ ಹಾಗೂ ಬಿನಲ್ಲಿ ಅಗತ್ಯ ದಾಖಲೆಗಳನ್ನು ಮಾತ್ರ ಸ್ಕಾ ್ಯನ್ ಮಾಡಿ ಅಪ್‌ಲೋಡ್ ಮಾಡಬೇಕು. ಮಾರ್ಚ್ ಅಂತ್ಯದೊಳಗೆ ಸ್ಕ್ಯಾನ್ ಹಾಗೂ ಅಪ್‌ಲೋಡ್ ಮಾಡಬೇಕು ಎಂದು ಸೂಚಿಸಿದರು.