ಪ್ರಯೋಗಾಲಯ ಆಧುನೀಕರಣಗೊಳಿಸಿ ; ಜಿ.ಎಂ.ಶುಗರ್ಸ್ ಕಾರ್ಖಾನೆಗೆ ದಿಢೀರ್ ಭೇಟಿ ನೀಡಿದ ಡಿಸಿ ಸೂಚನೆ
DC Visits Sugar Factory
Published on:
Copied
Follow Us
ಪ್ರಮುಖ ಮುಖ್ಯಾಂಶಗಳು
ಹಾವೇರಿ: ತಾಲೂಕಿನ ಸಂಗೂರ ಗ್ರಾಮದ ಜಿ.ಎಂ. ಶುಗರ್ಸ್ ಕಾರ್ಖಾನೆ
ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಭೇಟಿ
ಸಕ್ಕರೆ ಇಳುವರಿ, ಉತ್ಪಾದನೆ ಹಾಗೂ ಕಾರ್ಖಾನೆಯ ಕಾರ್ಯ ನಿರ್ವಹಣೆ ಕುರಿತು ಪರಿಶೀಲನೆ
ಹಾವೇರಿ: ತಾಲೂಕಿನ ಸಂಗೂರ ಗ್ರಾಮದ ಜಿ.ಎಂ. ಶುಗರ್ಸ್ ಕಾರ್ಖಾನೆಗೆ ಸೋಮವಾರ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಭೇಟಿ ನೀಡಿ, ಸಕ್ಕರೆ ಇಳುವರಿ, ಉತ್ಪಾದನೆ ಹಾಗೂ ಕಾರ್ಖಾನೆಯ ಕಾರ್ಯ ನಿರ್ವಹಣೆ ಕುರಿತು ಪರಿಶೀಲನೆ ನಡೆಸಿ, ಹಲವು ಸೂಚನೆಗಳನ್ನು ನೀಡಿದರು.
ಕಾರ್ಖಾನೆಯ ಸಕ್ಕರೆ ಇಳುವರಿ ಪರಿಶೀಲಿಸಿದ ಅವರು, ಪ್ರಯೋಗಾಲಯವನ್ನು ಆಧುನಿಕರಣಗೊಳಿಸಲು, ಕಾರ್ಖಾನೆಯಲ್ಲಿ ಉತ್ಪಾದನೆಯಾಗುವ ಉತ್ಪನ್ನದ ವಿವರಗಳನ್ನು ಪ್ರತಿನಿತ್ಯ ದಾಖಲಿಸಿ, ತಮ್ಮ ಕಚೇರಿಗೆ ವರದಿ ಸಲ್ಲಿಸಲು ಸೂಚಿಸಿದರು.
ಕಬ್ಬಿನ ತೂಕದ ಯಂತ್ರವನ್ನು ಪರಿಶೀಲಿಸಿದರು ಹಾಗೂ ತೂಕದಲ್ಲಿ ಯಾವುದೇ ವ್ಯತ್ಯಾಸವಾಗದಂತೆ ಎಚ್ಚರ ವಹಿಸಬೇಕು, ಕಾರ್ಖಾನೆಯ ಸುತ್ತಮುತ್ತಲೂ ಸ್ವಚ್ಚತೆಗೆ ಆದ್ಯತೆ ನೀಡಬೇಕು. ಕಾರ್ಖಾನೆಯ ಆಂತರಿಕ ರಸ್ತೆಗಳನ್ನು ದುರಸ್ತಿ ಮಾಡಬೇಕು ಎಂದು ಕಾರ್ಖಾನೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಕಾರ್ಖಾನೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಸಮಯಕ್ಕೆ ಸರಿಯಾಗಿ ವೇತನ ಪಾವತಿಸುವಂತೆ ಹಾಗೂ ಭವಿಷ್ಯ ನಿಧಿಯನ್ನು ಕಡಿತಗೊಳಿಸುವಂತೆ ಸೂಚನೆ ನೀಡಿದರು.
ಜಂಟಿ ಕೃಷಿ ನಿರ್ದೇಶಕ ಡಾ.ಕೆ.ಮಲ್ಲಿಕಾರ್ಜುನ, ತಹಸೀಲ್ದಾರ್ ಶರಣಮ್ಮ, ರೈತರು ಹಾಗೂ ಇತರರು ಉಪಸ್ಥಿತರಿದ್ದರು.