ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ಜಿಲ್ಲಾ ಅಧ್ಯಕ್ಷರಾಗಿ ಡಾ.ಗೀತಾ ಸುತ್ತಕೋಟಿ ನೇಮಕ

 savitri bai pule,
savitri bai pule,
Published on
ಹಾವೇರಿ: ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ(ರಿ) ಹಾವೇರಿ ಜಿಲ್ಲಾ ಘಟಕದ ಅಧ್ಯಕ್ಷರಾಗಿ ನಗರದ ಡಾ.ಗೀತಾ ಎಸ್. ಸುತ್ತಕೋಟಿ ಆಯ್ಕೆಯಾಗಿದ್ದಾರೆ.
ರಾಜ್ಯಾಧ್ಯಕ್ಷೆ ಡಾ.ಲತಾ ಮುಳ್ಳೂರು ಈ ಕುರಿತು ಆದೇಶ ಹೊರಡಿಸಿದ್ದು, ಶಿಕ್ಷಕಿಯರ ಸಲುವಾಗಿ ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಿರಂತರವಾಗಿ ಹಾವೇರಿ ಜಿಲ್ಲೆಯಲ್ಲಿ ಕಾರ್ಯಗತಗೊಳಿಸುತ್ತಿರುವ ಡಾ.ಸುತ್ತಕೋಟಿ ಅವರನ್ನು ಮತ್ತಷ್ಟು ಸಮಾಜಮುಖಿ ಕೆಲಸ ಮಾಡಲು ಪ್ರೇರಣೆ ನೀಡಲು ಈ ಆಯ್ಕೆ ಮಾಡಿರುವುದಾಗಿ ಅವರು ತಿಳಿಸಿದ್ದಾರೆ.
ಜಿಲ್ಲೆಯ ಎಲ್ಲ ತಾಲೂಕು ಅಧ್ಯಕ್ಷರು, ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಮತ್ತು ತಾಲೂಕು ಘಟಕ, ಸಾಹಿತಿ ಕಲಾವಿದರ ಬಳಗ ಇವರ ಆಯ್ಕೆಯನ್ನು ಸ್ವಾಗತಿಸಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net