ಹಾವೇರಿ: ಪಾರ್ಕಿಂಗ್ ಸ್ಥಳದಲ್ಲಿದ್ದ ಕಾರು ಏಕಾಏಕಿ ಬೆಂಕಿ ಹೊತ್ತಿ ಸಂಪೂರ್ಣ ಸುಟ್ಟು ಕರಕಲಾದ ಘಟನೆ ಶಿಗ್ಗಾಂವಿ ಪಟ್ಟಣದ ಡಾಕ್ಟರ್ ಬಿ.ಆರ್ ಅಂಬೇಡ್ಕರ್ ಆಡಳಿತ ಭವನದ ಸಂಕೀರ್ಣದ ಪಕ್ಕದ ಪಾರ್ಕಿಂಗ್ ಸ್ಥಳದಲ್ಲಿ ನಡೆದಿದೆ.
ಪಟ್ಟಣದ ಮುಕ್ತಿಯಾರ್ ಅಹ್ಮದ್ ಶಿರಹಟ್ಟಿ ಎಂಬುವವರಿಗೆ ಸೇರಿದ ಕಾರು ಎಂದು ತಿಳಿದು ಬಂದಿದೆ.
ಕಾರು ಬಹಳ ದಿನಗಳಿಂದ ಒಂದೇ ಸ್ಥಳದಲ್ಲಿ ನಿಂತಿತ್ತು ಎಂದು ತಿಳಿದು ಬಂದಿದ್ದು, ಕಾರು ಸ್ರ್ಕ್ಯಾಪ್ ಕಾರು ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಧಾವಿಸಿ, ಬೆಂಕಿ ನಂದಿಸಿದ್ದಾರೆ. ಈ ಕುರಿತು ಶಿಗ್ಗಾಂವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.