ತಮ್ಮ ಜಮೀನಿನಲ್ಲಿ ಕೃಷಿ ಮಾಡುತ್ತಿರುವ ರೈತರು, ಪ್ರತಿ ವರ್ಷವೂ ಮರಗಳನ್ನು ಕಡಿದು ಅರಣ್ಯ ಜಾಗವನ್ನು ಒತ್ತುವರಿ ಮಾಡುತ್ತಿದ್ದಾರೆ. ಇದರಿಂದ ಅರಣ್ಯ ನಾಶವಾಗುತ್ತಿದೆ ಎಂದು ಆರೋಪಿಸಿದ್ದ ಅರಣ್ಯ ಇಲಾಖೆ ಅಧಿಕಾರಿಗಳು, ಕಾವಲಿಗೆ ಸಿಬ್ಬಂದಿ ನಿಯೋಜಿಸಿದ್ದರು. ಮಂಗಳವಾರ ಹಾಗೂ ಬುಧವಾರ ಕೆಲ ರೈತರು, ಅರಣ್ಯ ಪ್ರದೇಶದ ಮರಗಳನ್ನು ಕಡಿದು ಹಾಕಿದ್ದರು. ಇದನ್ನು ಗಮನಿಸಿದ್ದ ಅಧಿಕಾರಿಗಳು, ಎರಡು ಎಫ್‌ಐಆರ್ ದಾಖಲಿಸಿಕೊಂಡಿದ್ದರು. ಒತ್ತುವರಿ ತೆರವು ಮಾಡಲು ಸ್ಥಳಕ್ಕೆ ಹೋಗಿದ್ದರು.