ಸಣ್ಣ ಕೈಗಾರಿಕೆಗಳ ಕುರಿತು ಕಾರ್ಯಾಗಾರ ಜ.28ರಂದು

Small, Industrial,
Small, Industrial,
Published on
ಹಾವೇರಿ: ಭಾರತ ಸರ್ಕಾರದ ವಿಶ್ವಬ್ಯಾಂಕ್ ನೆರವಿನೊಂದಿಗೆ ಅನುಷ್ಠಾನ ಮಾಡುತ್ತಿರುವ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಕಾರ್ಯಕ್ಷಮತೆ ಹೆಚ್ಚಿಸುವುದು ಮತ್ತು ವೇಗಗೊಳಿಸಲು ಎಂಎಸ್‌ಎಂಇ ಯೋಜನೆಯ ಅಡಿಯಲ್ಲಿ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಕರ್ನಾಟಕ ತಾಂತ್ರಿಕ ಉನ್ನತೀಕರಣ ಪರಿಷತ್(ಕೆಸಿಟಿಯು) ಜಿಲ್ಲಾ ಕೈಗಾರಿಕಾ ಕೇಂದ್ರದ ಸಹಯೋಗದಲ್ಲಿ ಜ.28ರಂದು ಬೆಳಗ್ಗೆ 10.30ಕ್ಕೆ ನಗರದ ಹೋಟೆಲ್ ಶಿವಾ ರೆಸಿಡೆನ್ಸಿಯಲ್ಲಿ ಜರುಗಲಿದೆ.
ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಅಧ್ಯಕ್ಷ ಜಿ.ವಿ.ಹಿರೇಗೌಡರ, ಜಿಲ್ಲಾ ಅಗ್ರಣೀಯ ವ್ಯವಸ್ಥಾಪಕ ಪ್ರಭುದೇವ.ಎನ್.ಜಿ, (ಗ್ರಾಕೈ) ಗ್ರಾಮೀಣ ಕೈಗಾರಿಕೆ ವಿಭಾಗದ ಉಪ ನಿರ್ದೇಶಕ ರಾಜೇಂದ್ರ ಕದಂ, ಶಿಗ್ಗಾಂವಿ ತಾಲೂಕು ಕೈಗಾರಿಕೋದ್ಯಮಿಗಳ ಅಭಿವೃದ್ಧಿ ಸಂಘದ ಕಾರ್ಯದರ್ಶಿ ಶಿವಲಿಂಗಪ್ಪ ಮಂಟಗಣಿ ಭಾಗವಹಿಸಲಿದ್ದಾರೆ.
ಜಿಲ್ಲೆಯ ಎಂಎಸ್‌ಎಂಇ ಉದ್ದಿಮೆದಾರರು ಈ ಕಾರ್ಯಾಗಾರದಲ್ಲಿ ಭಾಗವಹಿಸಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ, ಹಾವೇರಿ ಕಚೇರಿ ಸಂಪರ್ಕಿಸಲು ಕೋರಲಾಗಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net