ಹಾವೇರಿ: ನಗರದ ಜಿಲ್ಲಾ ಗುರು ಭವನದಲ್ಲಿ ಶನಿವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಚೇರಿಯಿಂದ ಹಮ್ಮಿಕೊಂಡಿದ್ದ ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶದ ವಿಶ್ಲೇಷಣೆ ಮತ್ತು ಅಭಿನಂದನಾ ಸಮಾರಂಭದಲ್ಲಿ, ಜಿಲ್ಲೆ ಈ ಬಾರಿ ಉತ್ತಮ ಫಲಿತಾಂಶ ಪಡೆಯಲು ಸಹಕರಿಸಿದ ಶಿಕ್ಷಕರನ್ನು ಡಿಸಿ ಡಾ.ವಿಜಯಮಹಾಂತೇಶ ದಾನಮ್ಮನವರ ಸನ್ಮಾನಿಸಿದರು. ಶಿಕ್ಷಣ ಇಲಾಖೆ ನಿರ್ದೇಶಕ ಈಶ್ವರ ನಾಯಕ, ಜಿಪಂ ಉಪ ಕಾರ್ಯದರ್ಶಿ ಡಾ.ಪುನೀತ್ ಆರ್., ಡಿಡಿಪಿಐ ಮೋಹನ ದಂಡಿನ, ಝಡ್.ಎಂ.ಖಾಜಿ, ಜಿಲ್ಲೆಯ ಬಿಇಒಗಳು, ಇತರರಿದ್ದರು.