ಹೆಜ್ಜೇನು ದಾಳಿ, 10 ವಿದ್ಯಾರ್ಥಿಗಳಿಗೆ ಗಾಯ

 honey bee, attacks
honey bee, attacks
Published on
ಹಾವೇರಿ: ನಗರದ ಟಿಎಂಇಎ ಕಾಲೇಜ್ ಆವರಣದಲ್ಲಿ ಹೆಜ್ಜೇನು ದಾಳಿಯಿಂದ 10ಕ್ಕೂ ಅಧಿಕ ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಶುಕ್ರವಾರ ನಡೆದಿದೆ.
ಕಾಲೇಜ್ ಆವರಣದಲ್ಲಿ ಕಟ್ಟಡ ಕಾಮಗಾರಿ ಮಾಡುವಾಗ ಏಕಾಏಕಿ ಹೆಜ್ಜೇನು ಹುಳುಗಳು ವಿದ್ಯಾರ್ಥಿಗಳ ಮೇಲೆ ದಾಳಿ ಮಾಡಿವೆ. 10ಕ್ಕೂ ಅಧಿಕ ವಿದ್ಯಾರ್ಥಿಗಳು ಗಾಯಗೊಂಡಿದ್ದು, ಸ್ಥಳೀಯರು ಅವರನ್ನು ರಕ್ಷಿಸಿ ಜಿಲ್ಲಾಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಿದರು. ನಾಲ್ವರಿಗೆ ತೀವ್ರ ಗಾಯಗಳಾಗಿದ್ದು, ಉಳಿದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net