ಹಾವೇರಿ ವಿವಿ ಗೌರವ ಡಾಕ್ಟರೇಟ್ ಘೋಷಣೆ; ಶ್ರೀ ಸದಾಶಿವ ಸ್ವಾಮೀಜಿ, ಬಸವರಾಜ ಬೊಮ್ಮಾಯಿ, ಸತೀಶ ಕುಲಕರ್ಣಿ ಆಯ್ಕೆ

honorary doctorate
honorary doctorate
Published on
ಹಾವೇರಿ: ಇಲ್ಲಿನ ಕೆರಿಮತ್ತಿಹಳ್ಳಿಯ ಹಾವೇರಿ ವಿಶ್ವವಿದ್ಯಾಲಯದ ಮೊದಲ ಘಟಿಕೋತ್ಸವದ ನಿಮಿತ್ತ ಜಿಲ್ಲೆಯ ಮೂವರಿಗೆ ಗೌರವ ಡಾಕ್ಟರೇಟ್ ನೀಡಲು ಹಾವೇರಿ ವಿಶ್ವವಿದ್ಯಾಲಯ ನಿರ್ಧರಿಸಿದೆ.
ಶಿಕ್ಷಣ ಕ್ಷೇತ್ರದಿಂದ ಹುಕ್ಕೇರಿ ಮಠದ ಶ್ರೀ ಸದಾಶಿವ ಸ್ವಾಮೀಜಿ, ಸಾಮಾಜಿಕ ಸೇವೆ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ಹಾಗೂ ಸಾಹಿತ್ಯ ಕ್ಷೇತ್ರದಿಂದ ಸತೀಶ ಕುಲಕರ್ಣಿ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲು ಆಯ್ಕೆ ಮಾಡಲಾಗಿದೆ ಎಂದು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಸುರೇಶ ಜಂಗಮಶೆಟ್ಟಿ, ಕುಲಸಚಿವ ಡಾ.ಎಸ್.ಟಿ.ಬಾಗಲಕೋಟಿ ತಿಳಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net