ಇಚ್ಚಂಗಿ - ಯಲ್ಲಾಪುರ ರಸ್ತೆಯಲ್ಲಿ ಗುಂಡಿಗಳ ಹಾವಳಿ; ರಸ್ತೆ ಹಾಳಾಗಿ ವಾಹನ ಸವಾರರ ಪರದಾಟ

Haveri, Yallapur, Ichchagi, Road, Problem,
Haveri, Yallapur, Ichchagi, Road, Problem,
Published on
ಹಾವೇರಿ: ಜಿಲ್ಲೆಯ ಸವಣೂರ ತಾಲೂಕಿನ ಇಚ್ಚಂಗಿ ಗ್ರಾಮದಿಂದ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಯಲ್ಲಾಪುರ ಗ್ರಾಮಕ್ಕೆ ಸಂಪರ್ಕಿಸುವ ಪ್ರಮುಖ ರಸ್ತೆ ಸಂಪೂರ್ಣ ಹಾಳಾಗಿದ್ದು, ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.
ರಸ್ತೆಯುದ್ದಕ್ಕೂ ದೊಡ್ಡ ದೊಡ್ಡ ಗುಂಡಿಗಳು ನಿರ್ಮಾಣವಾಗಿದ್ದು, ವಾಹನ ಸಂಚಾರ ದುಸ್ತರವಾಗಿದೆ. ಮಳೆ ಬಂದಾಗ ರಸ್ತೆ ಕೆಸರಿನ ಹೊಂಡಗಳಾಗಿ ಮಾರ್ಪಟ್ಟು ಬೈಕ್ ಸವಾರರು ಮತ್ತು ವಾಹನ ಚಾಲಕರು ಅಪಘಾತದ ಭೀತಿಯಲ್ಲಿ ಸಂಚರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ.
ಈ ರಸ್ತೆಯಲ್ಲಿ ಪ್ರತಿದಿನ ಶಾಲಾ ಮಕ್ಕಳು, ರೈತರು, ಕೂಲಿ ಕಾರ್ಮಿಕರು ಹಾಗೂ ಸಾರ್ವಜನಿಕರು ಓಡಾಡುತ್ತಾರೆ. ತುರ್ತು ಸೇವೆಗಳ ವಾಹನಗಳ ಸಂಚಾರಕ್ಕೂ ಅಡಚಣೆ ಉಂಟಾಗಿದೆ. ಹಲವಾರು ಬಾರಿ ಸಂಬಂಧಪಟ್ಟ ಇಲಾಖೆಯ ಗಮನಕ್ಕೆ ತಂದರೂ ಇದುವರೆಗೆ ಯಾವುದೇ ದುರಸ್ತಿ ಕಾರ್ಯ ಕೈಗೊಳ್ಳಲಾಗಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ತಕ್ಷಣ ರಸ್ತೆ ದುರಸ್ತಿ ಮಾಡಿ ಸಾರ್ವಜನಿಕರ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಬೇಕು. ಸಂಬಂಧಪಟ್ಟ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ, ತುರ್ತು ಕ್ರಮ ಕೈಗೊಳ್ಳುವಂತೆ ಸ್ಥಳೀಯ ವಾಹನ ಸವಾರ ಪ್ರವೀಣ ಮೂಲಿಮನಿ ಒತ್ತಾಯಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net