

ಹಿಜಾಬ್ ಹಾಕಿಕೊಂಡು ಬರುವ ವಿದ್ಯಾರ್ಥಿನಿಯರು, ಕಾಲೇಜಿನೊಳಗೆ ಸಮವಸ್ತ್ರದಲ್ಲಿಯೇ ಇರುತ್ತಾರೆ. ಆದರೆ, ಬುಧವಾರ ಇಬ್ಬರು ವಿದ್ಯಾರ್ಥಿನಿಯರು ಹಿಜಾಬ್ ಹಾಕಿಕೊಂಡೆ ತರಗತಿಯಲ್ಲಿ ಕುಳಿತುಕೊಂಡಿದ್ದರಿಂದ ಗುರುವಾರ ವಿದ್ಯಾರ್ಥಿಗಳು ಕೇಸರಿ ಶಾಲು ಹಾಕಿಕೊಂಡು ಬಂದಿದ್ದಾರೆ. ಯಾವುದೇ ಸಮಸ್ಯೆ ಇಲ್ಲ. ಎಲ್ಲ ಸಿಬ್ಬಂದಿಗಳೊಂದಿಗೆ ಸಭೆ ನಡೆಸಲಾಗುತ್ತಿದೆ. ವಿದ್ಯಾರ್ಥಿಗಳೊಂದಿಗೆ ಸಭೆ ನಡೆಸಿ ಸೂಕ್ತ ಕ್ರಮಕೈಗೊಳ್ಳಲಗುವುದು.