ಪುರಸಭೆ ಎದುರು ಮನೆ ಫಲಾನುಭವಿಗಳ ಪ್ರತಿಭಟನೆ house beneficiaries

ಶಿಗ್ಗಾಂವಿ ಪಟ್ಟಣದ ಪುರಸಭೆ ಎದುರು ಡಿವೈಎಫ್ ನಗರ ಸಮಿತಿ ಹಾಗೂ ಜಿ+1 ಮನೆ ಫಲಾನುಭವಿಗಳ house beneficiaries ಹೋರಾಟ ಸಮಿತಿ ನೇತೃತ್ವದಲ್ಲಿ ನಿವಾಸಿಗಳು ಮಂಗಳವಾರ ಪ್ರತಿಭಟನೆ ನಡೆಸಿದರು.
ಶಿಗ್ಗಾಂವಿ ಪಟ್ಟಣದ ಪುರಸಭೆ ಎದುರು ಡಿವೈಎಫ್ ನಗರ ಸಮಿತಿ ಹಾಗೂ ಜಿ+1 ಮನೆ ಫಲಾನುಭವಿಗಳ house beneficiaries ಹೋರಾಟ ಸಮಿತಿ ನೇತೃತ್ವದಲ್ಲಿ ನಿವಾಸಿಗಳು ಮಂಗಳವಾರ ಪ್ರತಿಭಟನೆ ನಡೆಸಿದರು.
Published on
ಶಿಗ್ಗಾಂವಿ: ಪಟ್ಟಣದ ಹೊರವಲಯದಲ್ಲಿ ಪುರಸಭೆ ವ್ಯಾಪ್ತಿಯಲ್ಲಿ ನಿರ್ವಣವಾದ ಜಿ+1 ಮನೆಗಳಿಗೆ ಅಗತ್ಯ ಮೂಲಸೌಲಭ್ಯ ಒದಗಿಸಲು ಅಧಿಕಾರಿಗಳು ವಿಳಂಬ ಮಾಡುತ್ತಿರುವುದನ್ನು ಖಂಡಿಸಿ ಡಿವೈಎಫ್ ನಗರ ಸಮಿತಿ ಹಾಗೂ ಜಿ+1 ಮನೆ ಫಲಾನುಭವಿಗಳ (house beneficiaries) ಹೋರಾಟ ಸಮಿತಿ ನೇತೃತ್ವದಲ್ಲಿ ಅಲ್ಲಿನ ನಿವಾಸಿಗಳು ಪುರಸಭೆ ಎದುರು ಮಂಗಳವಾರ ಪ್ರತಿಭಟನೆ ನಡೆಸಿದರು.
ಸ್ಥಳಕ್ಕಾಗಮಿಸಿ ಪುರಸಭೆ ಮುಖ್ಯಾಧಿಕಾರಿ ಮಲ್ಲೇಶ ಆರ್., ಹಾಗೂ ನಿರ್ವಿುತಿ ಕೇಂದ್ರದ ಅಧಿಕಾರಿ ರಮೇಶಗೌಡ ಅವರು ಶೀಘ್ರದಲ್ಲಿ ಸೌಲಭ್ಯ ಒದಗಿಸುವ ಭರವಸೆ ನೀಡಿದ ಮೇಲೆ ಪ್ರತಿಭಟನೆ ಹಿಂದಕ್ಕೆ ಪಡೆಯಲಾಯಿತು.
ಪ್ರತಿಭಟನೆಯಲ್ಲಿ ವೀರಣ್ಣ ಗಡ್ಡಿಯವರ, ಮೌಲಾಲಿ ನವಲಗುಂದ, ಕಿಶೋರ್ ದೋತ್ರರೆ, ಮಕಬುಲ್ ಯಲ್ಲಾಪೂರ, ಗುರುನಗೌಡ ದುಂಡಿಗೌಡ್ರ, ಕಸ್ತೂರಿ ವಡ್ಡರ, ಮಂಜುಳಾ ತಡಸ, ಸುಮಿತ್ರಾ ಶಿರಹಟ್ಟಿ, ರಾಧಾ ಆಲೂರು, ಅಸ್ಮಾ ದೇವಸೂರು, ಸಾವಿತ್ರಿ ಚೌಹಾಣ, ಬಸೀರಾಬಾನು ಖುರ್ಷಾಪುರ, ಮಾಲಾನಬಿ ಬಡಿಗೇರ, ಕೃಷ್ಣಪ್ಪ ಗದಗ, ಗಣೇಶ ತೋಟಗೆರ, ರುದ್ರೇಶ ಗೌರಣ್ಣನವರ, ಶಂಭು ಗಾಟೆನವರ, ಅಮಿತ ಬಿಂದಲಗಿ, ಕಾಶಮ್ಮ ತಿಟ್ಟೇನವರ, ಜಯಮ್ಮ ಅಂಗಡಿ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net