

ಹಾನಗಲ್ಲ: ಅಕ್ರಮವಾಗಿ ಸಾಗಿಸುತ್ತಿದ್ದ ಪಡಿತರ ಅಕ್ಕಿಯನ್ನು ಜಪ್ತಿ ಮಾಡಿದ ಅಧಿಕಾರಿಗಳು ಮೂವರ ವಿರುದ್ಧ ತಾಲೂಕಿನ ಆಡೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಬಂಕಾಪುರದ ನಿವಾಸಿ ಸಾಬೀರ್, ನರೇಗಲ್ಲ ಗ್ರಾಮದ ಸಿರಾಜ್ಅಹ್ಮದ್ ಬಾಬಾಜಾನ್ ಬುಡ್ಡಣ್ಣನವರ, ಮೌಲಾಲಿ ಗೌಸುಸಾಬ ಹರವಿ ಎಂಬುವವರ ವಿರುದ್ಧ ಪ್ರಕರಣ ದಾಖಲಾಗಿದೆ.
ಇವರು ಪಡಿತರ ಅಕ್ಕಿಯನ್ನು ಸಂಗ್ರಹಿಸಿಕೊಂಡು ಮಾರಾಟ ಮಾಡಲು ತೆಗೆದುಕೊಂಡು ಹೋಗುತ್ತಿದ್ದ ಸಮಯದಲ್ಲಿ ದಾಳಿ ನಡೆಸಿದ ಅಧಿಕಾರಿಗಳು 560 ಕೆ.ಜಿ. ಪಡಿತರ ಅಕ್ಕಿ ವಶಪಡಿಸಿಕೊಂಡಿದ್ದಾರೆ. ಆಹಾರ ಇಲಾಖೆಯ ಶಿರಸ್ತೇದಾರ ವೆಂಕಟೇಶ ದೊಡ್ಡಮನಿ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದಾರೆ.