ಅಕ್ರಮವಾಗಿ ಸಾಗಿಸುತ್ತಿದ್ದ 8 ಕ್ವಿಂಟಾಲ್ ಪಡಿತರ ಅಕ್ಕಿ ವಶ

Crime
Crime
Published on

ಹಾವೇರಿ: ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಟ ಮಾಡುತ್ತಿದ್ದ ವಾಹನ ಜಪ್ತಿ ಮಾಡಿದ ಅಧಿಕಾರಿಗಳು 18 ಸಾವಿರ ರೂ. ಮೌಲ್ಯದ 8 ಕ್ವಿಂಟಾಲ್ ಅಕ್ಕಿ ವಶಪಡಿಸಿಕೊಂಡ ಘಟನೆ ತಾಲೂಕಿನ ಗುತ್ತಲ ಬಳಿ ನಡೆದಿದೆ.

ತಾಲೂಕಿನ ಹೊಸರಿತ್ತಿ ಗ್ರಾಮದ ಗುರುಶಾಂತಪ್ಪ ಕುಬಸದ ಎಂಬುವನು ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಟ ಮಾಡುತ್ತಿದ್ದ.

ಈ ಕುರಿತ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಆಹಾರ ಇಲಾಖೆ ಅಧಿಕಾರಿಗಳು ಪಡಿತರ ಅಕ್ಕಿ ವಶಪಡಿಸಿಕೊಂಡಿದ್ದಾರೆ. ಈ ಕುರಿತು ಗುತ್ತಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net