ಸಹಾಯಕ ನಿರ್ದೇಶಕರೊಂದಿಗೆ ಅನುಚಿತ ವರ್ತನೆ

ಸವಣೂರ ಪಟ್ಟಣದಲ್ಲಿರುವ ತಾಲೂಕು ಭೂ ದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಇತ್ತೀಚೆಗೆ ನಡೆದ ಸಹಾಯಕ ನಿರ್ದೇಶಕರೊಂದಿಗೆ ಕೆಲವರು ಅನುಚಿತ ವರ್ತನೆ ಕೈಗೊಂಡಿರುವುದನ್ನು ಖಂಡಿಸಿ ರಾಜ್ಯ ನೌಕರರ ಸಂಘದ ತಾಲೂಕು ಘಟಕದ ಪದಾಧಿಕಾರಿಗಳು ಗುರುವಾರ ತಹಸೀಲ್ದಾರ್ ರವಿಕುಮಾರ ಕೊರವರ ಅವರಿಗೆ ಮನವಿ ಸಲ್ಲಿಸಿದರು. ಬಸವರಾಜ ಹೊಸಮನಿ,  ಚನ್ನಪ್ಪ ಬಮ್ಮಕ್ಕನವರ, ಸಂದೇಶ ಲಾಡ್, ಇತರರಿದ್ದರು.

Published on

ಪ್ರಮುಖ ಮುಖ್ಯಾಂಶಗಳು

  • ರಾಜ್ಯ ನೌಕರರ ಸಂಘದ ತಾಲೂಕು ಘಟಕದಿಂದ ತಹಸೀಲ್ದಾರ್ ಕೊರವರಗೆ ಮನವಿ
  • ವಿಡಿಯೋ ಚಿತ್ರೀಕರಣ ಮಾಡಿ ನೌಕರರ ಆತ್ಮಸ್ಥೈರ್ಯ ಕುಗ್ಗಿಸುವ ಕೆಲಸ
ಸವಣೂರ: ತಾಲೂಕು ಭೂ ದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಇತ್ತೀಚೆಗೆ ನಡೆದ ಸಹಾಯಕ ನಿರ್ದೇಶಕರೊಂದಿಗೆ ಕೆಲವರು ಅನುಚಿತ ವರ್ತನೆ ಕೈಗೊಂಡಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ನೌಕರರ ಸಂಘದ ತಾಲೂಕು ಘಟಕದ ಪದಾಧಿಕಾರಿಗಳು ಗುರುವಾರ ತಹಸೀಲ್ದಾರ್ ರವಿಕುಮಾರ ಕೊರವರ ಅವರಿಗೆ ಮನವಿ ಸಲ್ಲಿಸಿದರು.
ಭೂ ದಾಖಲೆಗಳ ಸಹಾಯಕ ನಿರ್ದೇಶಕ ದೇವಯ್ಯ ಅವರೊಂದಿಗೆ ಕಚೇರಿಯಲ್ಲಿ ನಿಯಮ ಬಾಹಿರ ಕೆಲಸ ಮಾಡಿಕೊಡುವಂತೆ ಒತ್ತಾಯ ಮಾಡಿರುವ ಹಿನ್ನ್ನೆಲೆಯಲ್ಲಿ ಸಹಾಯಕ ನಿರ್ದೇಶಕ ದೇವಯ್ಯ ಅವರು ನಿರಾಕರಣೆ ಮಾಡಿದ್ದಾರೆ. ಇದನ್ನೆ ನೆಪವಾಗಿಟ್ಟುಕೊಂಡು ಕೆಲಸಕ್ಕೆ ಬಂದವರು ವಿಡಿಯೋ ಚಿತ್ರೀಕರಣ ಮಾಡಿ ನೌಕರರ ಆತ್ಮಸ್ಥೈರ್ಯ ಕುಗ್ಗಿಸುವ ಕೆಲಸ ಮಾಡಿರುತ್ತಾರೆ. ವಿಡಿಯೋ ಚಿತ್ರೀಕರಣ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಾಕುವ ಮೂಲಕ ನೌಕರರ ಮನೋಬಲ ಕುಗ್ಗಿಸುವ ಕೆಲಸ ಆಗುತ್ತಿದೆ. ಆದ್ದರಿಂದ, ಈ ಕೃತ್ಯದಿಂದ ಮಾನಸಿಕ ಆಘಾತಕ್ಕೆ ಒಳಗಾಗಿರುವ ನಿರ್ದೇಶಕ ದೇವಯ್ಯ ಅವರಿಗೆ ಸೂಕ್ತ ನ್ಯಾಯ ದೊರಕಿಸಿಕೊಡಲು ಮುಂದಾಗಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.
ಕರ್ನಾಟಕ ರಾಜ್ಯ ನೌಕರರ ಸಂಘದ ತಾಲೂಕು ಘಟಕ ಅಧ್ಯಕ್ಷ ಬಸವರಾಜ ಹೊಸಮನಿ, ಪದಾಧಿಕಾರಿಗಳಾದ ಚನ್ನಪ್ಪ ಬಮ್ಮಕ್ಕನವರ, ಸಂದೇಶ ಲಾಡ್, ಪಟೇಲ್ ಮೊಹಮ್ಮದ ಆಸಗರ, ದೇವಯ್ಯ, ಇಮ್ರಾನ್ ಅಮ್ಮಿನಬಾವಿ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net