

ರಾಣೆಬೆನ್ನೂರ: ಐಪಿಎಲ್ ಬೆಟ್ಟಿಂಗ್ ಆಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಇಲ್ಲಿಯ ಶಹರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.
ನಗರದ ದೊಡ್ಡಪೇಟೆ ನಿವಾಸಿ ಬಸವರಾಜ ಮಂಜುನಾಥ ಕೋಳೂರ, ಪ್ರವಿಣ ಸಿದ್ದಪ್ಪ ಕನ್ನಪ್ಪಳವರ ಬಂಧಿತ ಆರೋಪಿತರು.
ಇವರು ಇಲ್ಲಿಯ ಎಪಿಎಂಸಿ ಆವರಣದಲ್ಲಿ ಕುಳಿತು ಐಪಿಎಲ್ ಬೆಟ್ಟಿಂಗ್ ಆಡುತ್ತಿದ್ದರು. ಈ ಕುರಿತು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಕುರಿತು ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.