ಕೆ.ಎಸ್. ಭಗವಾನ್ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ

ಮನವಿ ಸಲ್ಲಿಕೆ
ಮನವಿ ಸಲ್ಲಿಕೆ
Published on

ರಾಣೆಬೆನ್ನೂರು: ಹಿಂದೂ ಧರ್ಮ, ಶ್ರೀರಾಮ ಹಾಗೂ ಹಿಂದೂ ದೇವತೆಗಳ ಕುರಿತು ಅವಹೇಳನಕಾರಿ, ಪ್ರಚೋದನಕಾರಿ ಮತ್ತು ಧಾಮಿರ್ಕ ಭಾವನೆಗಳಿಗೆ ಧಕ್ಕೆ ಉಂಟುಮಾಡುವ ಹೇಳಿಕೆ ನೀಡಿರುವ ಕೆ.ಎಸ್. ಭಗವಾನ್ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ತಹಸೀಲ್ದಾರ್ ಆರ್.ಎಚ್. ಭಾಗವಾನ್ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ಹರಿಹರದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡ ಕೆ.ಎಸ್. ಭಗವಾನ್ ಸಾರ್ವಜನಿಕ ವೇದಿಕೆಯಲ್ಲಿ ಹಿಂದೂ ಧರ್ಮ, ಶ್ರೀರಾಮನ ಕುರಿತು ಅವಹೇಳನಕಾರಿ ಮತ್ತು ವಿವಾದಾತ್ಮಕ ಹೇಳಿಕೆಗಳನ್ನು ನೀಡಿರುವುದು ಖಂಡನೀಯ. ತಮ್ಮ ಭಾಷಣದಲ್ಲಿ ಅವರು ಪ್ರಭು ಶ್ರೀರಾಮರ ಕುರಿತು ಆಧಾರರಹಿತ ಆರೋಪಗಳನ್ನು ಮಾಡುವುದರ ಜೊತೆಗೆ ಹಿಂದೂ ಧರ್ಮದ ನಂಬಿಕೆಗಳು, ಧಾಮಿರ್ಕ ಆಚರಣೆಗಳು ಮತ್ತು ದೇವತೆಗಳ ಕುರಿತು ಅವಮಾನಕಾರಿಯಾಗಿ ಮಾತನಾಡಿದ್ದಾರೆ. ಇದರಿಂದ ಕೋಟ್ಯಂತರ ಹಿಂದೂಗಳ ಧಾಮಿರ್ಕ ಭಾವನೆಗಳಿಗೆ ನೋವುಂಟು ಆಗಿದೆ. ಕೂಡಲೇ ಕೆ.ಎಸ್. ಭಾಗವಾನ್ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.

ಪ್ರಮುಖರಾದ ಕೃಷ್ಣಾಸಾ ಪವಾರ, ಅರ್ಚಕರ ಸಂಘದ ಉಪಾಧ್ಯಕ್ಷ ಶಿವಕುಮಾರ ಹಿರೇಮಠ, ವಕೀಲ ಸಂಜೀವ ಕೊಪ್ಪದ, ಪ್ರಶಾಂತ ಉದಗಟ್ಟಿ, ಸೋಮರೆಡ್ಡಿ ಯರೆಕುಪ್ಪಿ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net