ಶಿಗ್ಗಾಂವ: ಕೆರೆಯಲ್ಲಿ ಕಾಲು ತೊಳೆಯಲು ಹೋದ ವೃದ್ಧರೊಬ್ಬರು ಕಾಲು ಜಾರಿ ಬಿದ್ದು ಮೃತಪಟ್ಟ ಘಟನೆಪಟ್ಟಣದ ಹಿರೇಕೆರೆಯಲ್ಲಿ ನಡೆದಿದೆ..ಶೇಖಪ್ಪ ಬಸಪ್ಪ ಕುಂಬಾರ (63) ಮೃತ ವೃದ್ಧ..ಇವರು ಕೆರೆಯಲ್ಲಿ ಕಾಲು ತೊಳೆಯಲು ಹೋದಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ. ಈ ಕುರಿತು ಶಿಗ್ಗಾಂವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.