ಜಮೀನಿನಲ್ಲಿ ಹಾವು ಕಚ್ಚಿ ವ್ಯಕ್ತಿ ಸಾವು

Crime
Crime
Published on

ಬ್ಯಾಡಗಿ: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಹಾವು ಕಡಿದು ಮೃತಪಟ್ಟ ಘಟನೆ ತಾಲೂಕಿನ ಕಲ್ಲೇದೇವರ ಗ್ರಾಮದಲ್ಲಿ ನಡೆದಿದೆ.

ಪುಟ್ಟನಗೌಡ ಬಸನಗೌಡ ಇದೇಗೌಡ್ರ (50) ಮೃತ ವ್ಯಕ್ತಿ.

ಇವರು ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಸಮಯದಲ್ಲಿ ಹಾವು ಕಚ್ಚಿ ಮೃತಪಟ್ಟಿದ್ದಾರೆ. ಈ ಕುರಿತು ಬ್ಯಾಡಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net