ನೀರು ಹಾಯಿಸಲು ಹೋದವರು ಜಾರಿ ಬಿದ್ದು ಸಾವು

Crime
Crime
Published on

ಹಾನಗಲ್ಲ: ಮೆಕ್ಕೆಜೋಳದ ಜಮೀನಿನಲ್ಲಿ ನೀರು ಹಾಯಿಸಲು ಹೋದ ವ್ಯಕ್ತಿ ಕಾಲು ಜಾರಿ ಕೆಳಗೆ ಬಿದ್ದು ಮೃತಪಟ್ಟ ಘಟನೆ ತಾಲೂಕಿನ ಯಳ್ಳೂರು ಗ್ರಾಮದಲ್ಲಿ ನಡೆದಿದೆ.

ಕುಮಾರಯ್ಯ ಬಸವಣ್ಣೆಯ್ಯ ಮಜ್ಜನಮಠ (45) ಮೃತ ವ್ಯಕ್ತಿ.

ಇವರು ಜಮೀನಿನಲ್ಲಿ ನೀರು ಹಾಯಿಸಲು ಹೋದಾಗ ಕಾಲು ಜಾರಿ ಬಿದ್ದಿದ್ದರಿಂದ ಮುಖಕ್ಕೆ ಬಲವಾದ ಪೆಟ್ಟು ಬಿದ್ದು ಮೃತಪಟ್ಟಿದ್ದಾರೆ. ಈ ಕುರಿತು ಹಾನಗಲ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net