ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಕಾನೂನಿನ ಅರಿವು ಅಗತ್ಯ

ಕಾನೂನು ಅರಿವು ನೆರವು ಕಾರ್ಯಕ್ರಮ
ಕಾನೂನು ಅರಿವು ನೆರವು ಕಾರ್ಯಕ್ರಮ
Published on

ರಾಣೆಬೆನ್ನೂರು: ಮಕ್ಕಳನ್ನು ಶಿಕ್ಷಣದಿಂದ ದೂರವಿಟ್ಟು ಗ್ಯಾರೇಜ್, ಖಾಸಗಿ ಸಂಸ್ಥೆಗಳು ಹಾಗೂ ಇತರೆ ಕೆಲಸಗಳಿಗೆ ಬಳಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದೆ. ಪ್ರತಿಯೊಬ್ಬ ಮಗುವಿಗೂ ಶಿಕ್ಷಣ ಪಡೆಯುವ ಹಕ್ಕಿದ್ದು, ಇದನ್ನು ಸಮರ್ಪಕವಾಗಿ ಜಾರಿಗೊಳಿಸುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದು 1ನೇ ಹೆಚ್ಚುವರಿ ಹಿರಿಯ ದಿವಾಣಿ ನ್ಯಾಯಾಧೀಶ ಹಾಗೂ ತಾಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷ ಬಾಲಮುಕುಂದ ರಮೇಶರಾವ್ ಮುತಾಲಿಕದೇಸಾಯಿ ಹೇಳಿದರು.

ನಗರದ ದೇವಿಕಾ ಸ್ಕೂಲ್ನಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ತಾಲೂಕು ಆಡಳಿತ, ಕಾಮಿರ್ಕ ಇಲಾಖೆ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಿದ್ದ ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನಾಚರಣೆ ಹಾಗೂ ಕಾನೂನು ಅರಿವು- ನೆರವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಸಂವಿಧಾನವು ಮಕ್ಕಳಿಗೆ ಶಿಕ್ಷಣದ ಹಕ್ಕನ್ನು ನೀಡಿದೆ. ಪ್ರತಿ ಮಗುವಿಗೂ ಉಚಿತ ಹಾಗೂ ಕಡ್ಡಾಯ ಶಿಕ್ಷಣ ದೊರೆಯಬೇಕು. ಮಕ್ಕಳನ್ನು ದುಡಿಮೆಗೆ ಬಳಸಿಕೊಳ್ಳುವ ಮೂಲಕ ಅವರ ಭವಿಷ್ಯ ಕಸಿದುಕೊಳ್ಳಬಾರದು. ಬಾಲ ಕಾಮಿರ್ಕ ಪದ್ಧತಿ ತಡೆಗೆ ಸಮಾಜದ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದರು.

ತಾಲೂಕು ಕಾನೂನು ಸೇವಾ ಸಮಿತಿ ಪ್ಯಾನಲ್ ವಕೀಲ ಎಚ್.ಎಸ್. ಶಿರೂರ, ಬಾಲ ಕಾಮಿರ್ಕ ನಿಷೇಧ ಕಾಯ್ದೆ- 1986 ಕುರಿತು ಉಪನ್ಯಾಸ ನೀಡಿದರು. ಮಕ್ಕಳ ಹಕ್ಕುಗಳು, ಬಾಲ ಕಾಮಿರ್ಕ ಪದ್ಧತಿಯಿಂದಾಗುವ ದುಷ್ಪರಿಣಾಮ ಹಾಗೂ ಕಾನೂನಿನಲ್ಲಿರುವ ಶಿಕ್ಷೆಗಳ ಕುರಿತು ಮಾಹಿತಿ ನೀಡಿದರು.

ಪ್ರಧಾನ ದಿವಾಣಿ ನ್ಯಾಯಾಧೀಶ ಆದಿತ್ಯಕುಮಾರ ಎಚ್.ಆರ್., ವಕೀಲರ ಸಂಘದ ಅಧ್ಯಕ್ಷ ಬಿ.ಎಚ್. ಬುರಡಿಕಟ್ಟಿ, ಅಪರ ಸರ್ಕಾರಿ ವಕೀಲ ಟಿ.ಎಸ್. ಪಾಟೀಲ, ಕ್ಷೇತ್ರ ಶಿಕ್ಷಣಾಧಿಕಾರಿ ಶ್ಯಾಮಸುಂದರ ಅಡಿಗ ಹಾಗೂ ಶಾಲೆಯ ಶಿಕ್ಷಕರು, ಸಿಬ್ಬಂದಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net