ಸವಣೂರು ಪಟ್ಟಣದ ಪುರಸಭೆ municipality ಆವರಣದಲ್ಲಿ ಸೋಮವಾರ ಏರ್ಪಡಿಸಿದ್ದ ಜನಸ್ಪಂದನ ಕಾರ್ಯಕ್ರಮದಲ್ಲಿ ಶಾಸಕ ಯಾಸೀರಖಾನ್ ಪಠಾಣ ಮಾತನಾಡಿದರು.
Published on:
Copied
Follow Us
ಸವಣೂರು: ಸಾರ್ವಜನಿಕರ ಕೆಲಸ ಮಾಡಿಕೊಡಲು ಅ„ಕಾರಿಗಳು ಹಣ ಪಡೆಯುತ್ತಿರುವ ಬಗ್ಗೆ ದೂರುಗಳು ಹೆಚ್ಚಾಗಿವೆ. ಅಂತಹ ಅ„ಕಾರಿಗಳ ವಿರುದ್ಧ ಕೂಡಲೇ ಕಾನೂನು ಕ್ರಮ ಕೈಗೊಂಡು ಪಾರದರ್ಶಕ ಆಡಳಿತಕ್ಕೆ ಪುರಸಭೆ municipality ಮುಂದಾಗಬೇಕು ಎಂದು ಶಾಸಕ ಯಾಸೀರಖಾನ್ ಪಠಾಣ ಸೂಚಿಸಿದರು.
ಪಟ್ಟಣದ ವಿವಿಧ ಸ್ಥಳಗಳಲ್ಲಿ ಸೋಮವಾರ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ, ನಂತರ ಪುರಸಭೆ ಆವರಣದಲ್ಲಿ ಏರ್ಪಡಿಸಿದ್ದ ಜನಸ್ಪಂದನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಸವಣೂರು ಭಾವೈಕ್ಯಕ್ಕೆ ಹೆಸರಾದ ಪಟ್ಟಣ. ಇಲ್ಲಿ ಸುಲಿಗೆಕೋರರಿಗೆ ಜಾಗವಿಲ್ಲ. ಸಾರ್ವಜನಿಕರ ಅಹವಾಲುಗಳಿಗೆ ಸ್ಪಂದನೆ ನೀಡಿ ತ್ವರಿತಗತಿಯಲ್ಲಿ ಕೆಲಸ ನಿರ್ವಹಿಸಬೇಕು ಎಂದರು.
ಈಗಾಗಲೇ ಸವಣೂರು-ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದಲ್ಲಿ ಸುಮಾರು 1400 ಕೋಟಿ ರೂ.ಗಳ ಅನುದಾನದಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ಅಲ್ಲದೆ, ಸೋಮವಾರವೂ ಪಟ್ಟಣದ ವಿವಿಧ ಸ್ಥಳಗಳಲ್ಲಿ ಅಂದಾಜು 10 ಕೋಟಿ ರೂ.ಗಳ ಅನುದಾನದಲ್ಲಿ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಲಾಗಿದೆ.
ಚಾಲನೆ ನೀಡಲು ತೆರಳಿದ ಸಂದರ್ಭದಲ್ಲಿ ಸ್ವಚ್ಛತೆ ಹಾಗೂ ಇತರ ವಿಷಯಗಳಿಗೆ ಸಂಬಂಧಪಟ್ಟಂತೆ ಸಾರ್ವಜನಿಕರು ಪುರಸಭೆ ವಿಷಯದಲ್ಲಿ ಬಹಳಷ್ಟು ದೂರುಗಳನ್ನು ಸಲ್ಲಿಸಿದ್ದಾರೆ. ಆದ್ದರಿಂದ, ಉಪ ವಿಭಾಗಾ„ಕಾರಿಗಳು ಹಾಗೂ ಸಂಬಂಧಪಟ್ಟ ಅ„ಕಾರಿಗಳು ಪ್ರತಿ ವಾರ್ಡ್‍ಗೆ ಭೇಟಿ ನೀಡಿ ಸಾರ್ವಜನಿಕರ ಅಹವಾಲು ಸ್ವೀಕರಿಸಿ, ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದರು.
ಉಪ ವಿಭಾಗಾ„ಕಾರಿ ಕಲ್ಯಾಣಿ ಕಾಂಬಳೆ, ತಹಸೀಲ್ದಾರ್ ರವಿಕುಮಾರ ಕೊರವರ, ಡಿವೈಎಸ್ಪಿ ಗುರುಶಾಂತಪ್ಪ ಕೆ.ವಿ., ತಾಪಂ ಇಒ ಬಿ.ಎಸ್. ಶಿಡೇನೂರ, ಎಸ್.ಎಫ್. ಮಣಕಟ್ಟಿ, ಎಂ.ಜೆ. ಮುಲ್ಲಾ, ಮಾಲತೇಶ ಸಾಲಿ, ನವೀನ ಬಂಡಿವಡ್ಡರ, ಇತರರು ಇದ್ದರು.