Green day ಹಸಿರುಮಯ ವಾತಾವರಣಕ್ಕೆ ಸಹಕರಿಸಲಿ

ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಬ್ಯಾಡಗಿಯ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ಸಸಿ ನೆಡುವ ಕಾರ್ಯಕ್ರಮಕ್ಕೆ ಮಾಜಿ ಶಾಸಕ ಸುರೇಶಗೌಡ್ರ ಪಾಟೀಲ ಚಾಲನೆ ನೀಡಿದರು. ತಾಲೂಕು ಆರೋಗ್ಯಾಧಿಕಾರಿ ಡಾ.ಕಾಂತೇಶ ಭಜಂತ್ರಿ, ಡಾ.ಮಹೇಶ, ಸಂತೋಷ ಡಿ.ಎನ್. ಚಂದ್ರಶೇಖರ ಇತರರಿದ್ದರು.
ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಬ್ಯಾಡಗಿಯ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ಸಸಿ ನೆಡುವ ಕಾರ್ಯಕ್ರಮಕ್ಕೆ ಮಾಜಿ ಶಾಸಕ ಸುರೇಶಗೌಡ್ರ ಪಾಟೀಲ ಚಾಲನೆ ನೀಡಿದರು. ತಾಲೂಕು ಆರೋಗ್ಯಾಧಿಕಾರಿ ಡಾ.ಕಾಂತೇಶ ಭಜಂತ್ರಿ, ಡಾ.ಮಹೇಶ, ಸಂತೋಷ ಡಿ.ಎನ್. ಚಂದ್ರಶೇಖರ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಮಾಜಿ ಶಾಸಕ ಸುರೇಶಗೌಡ್ರ ಪಾಟೀಲ ಸಲಹೆ
  • ವಿಶ್ವ ಪರಿಸರ ದಿನಾಚರಣೆಗೆ ಚಾಲನೆ
ಬ್ಯಾಡಗಿ: ಶಾಲಾ-ಕಾಲೇಜು, ಸರ್ಕಾರಿ ಕಚೇರಿಗಳ ಆವರಣಗಳಲ್ಲಿ ಎಲ್ಲ ನೌಕರರು, ಸಾರ್ವಜನಿಕರು ಸಸಿ ಹಚ್ಚಿ ಬೆಳೆಸುವ ಮೂಲಕ ಸಂಪೂರ್ಣ ಹಸಿರುಮಯ ವಾತಾವರಣ ಸೃಷ್ಟಿಸಬೇಕಿದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಸಹಕಾರ ನೀಡಬೇಕು ಎಂದು ಮಾಜಿ ಶಾಸಕ ಸುರೇಶಗೌಡ್ರ ಪಾಟೀಲ ಹೇಳಿದರು.
ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಪಟ್ಟಣದ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಪರಿಸರ ಸ್ನೇಹಿ ಬಳಗದ ವತಿಯಿಂದ ಆಯೋಜಿಸಿದ್ದ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ನಮ್ಮ ಪೂರ್ವಜರು ಉಳಿಸಿದಂತಹ ಅರಣ್ಯವನ್ನು ನಾಶಪಡಿಸುವ ಮೂಲಕ ಅವನತಿ ಹಾದಿಯಲ್ಲಿ ಸಾಗುತ್ತಿದ್ದೇವೆ. ನಮ್ಮ ಸ್ವಾರ್ಥದಿಂದಾಗಿ ಜೀವಸಂಕುಲಗಳ ನಾಶಕ್ಕೆ ಮುಂದಾಗಿದ್ದೇವೆ. ಭವಿಷ್ಯದ ಹಿತದೃಷ್ಟಿಯಿಂದ ಗಿಡ-ಮರ ಉಳಿಸಿ, ನೀರು, ಮಣ್ಣು, ಸುತ್ತಲಿನ ಪರಿಸರ ಸಂರಕ್ಷಿಸಬೇಕಿದೆ. ನಾವು ಎಷ್ಟೇ ಸಂಪತ್ತು ಗಳಿಸಿದರೂ ಪರಿಸರಕ್ಕೆ ಪೂರಕವಾಗಿರದಿದ್ದರೆ ಏನು ಪ್ರಯೋಜನವಿಲ್ಲ. ಹಸಿರು ಕಾಪಾಡದಿದ್ದಲ್ಲಿ ಮನುಷ್ಯ ಸೇರಿದಂತೆ ಎಲ್ಲ ಜೀವಿಗಳ ಉಸಿರು ನಿಲ್ಲುವುದರಲ್ಲಿ ಅನುಮಾನವಿಲ್ಲ ಎಂದರು.
ಪರಿಸರ ಸ್ನೇಹಿ ಬಳಗದ ಅಧ್ಯಕ್ಷ ಮೋಹನಕುಮಾರ ಹುಲ್ಲತ್ತಿ ಮಾತನಾಡಿ, ಅರಣ್ಯ ನಾಶದಿಂದ ಜಾಗತಿಕವಾಗಿ ತಾಪಮಾನ ನಿರಂತರವಾಗಿ ಏರಿಕೆಯಾಗುತ್ತಿದೆ. ಶಾಲಾ-ಕಾಲೇಜ್‌ಗಳಿಗೆ ತೆರಳಿ ಪರಿಸರ ರಕ್ಷಣೆಗೆ ಜಾಗೃತಿ ಮೂಡಿಸುತ್ತಿದ್ದೇವೆ. ಸರ್ಕಾರಿ ಕಚೇರಿಗಳ ಆವರಣಗಳಲ್ಲಿ ಸಾಕಷ್ಟು ಜಾಗವಿದ್ದು, ಅಂತಹ ಕಡೆಗಳಲ್ಲಿ ಸಂಘ-ಸಂಸ್ಥೆಗಳು ಹಾಗೂ ಅರಣ್ಯ ಇಲಾಖೆ ಜಂಟಿಯಾಗಿ ಸಸಿ ನೆಡಬೇಕು ಎಂದರು.
ತಾಲೂಕು ಆರೋಗ್ಯಾಧಿಕಾರಿ ಡಾ.ಕಾಂತೇಶ ಭಜಂತ್ರಿ, ಡಾ.ಮಹೇಶ, ಸಂತೋಷ ಡಿ.ಎನ್. ಚಂದ್ರಶೇಖರ ಇತರರಿದ್ದರು.
"

ತಾಲೂಕಾಸ್ಪತ್ರೆ ಆವರಣದ ಸುತ್ತಲೂ ಹೊಸದಾಗಿ ಸಸಿಗಳನ್ನು ಬೆಳೆಸಲು ಸಿಬ್ಬಂದಿ ಜತೆ ಸಭೆ ಮಾಡಿದ್ದೇವೆ. ಪ್ರತಿಯೊಬ್ಬ ಸಿಬ್ಬಂದಿ ಒಂದೊಂದು ಸಸಿ ನೆಟ್ಟು ಬೆಳೆಸುವ ಸಂಕಲ್ಪ ಮಾಡಲು ನಿರ್ಧರಿಸಿದ್ದೇವೆ. ಇದರೊಂದಿಗೆ ತಾಲೂಕಿನ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರ, ನಮ್ಮ ಕ್ಲಿನಿಕ್ ಸೇರಿದಂತೆ ಅನುಕೂಲವಿರುವ ಕಡೆಗಳಲ್ಲಿ ಸಸಿ ಬೆಳೆಸಿ ಉತ್ತಮ ಪರಿಸರ ನಿರ್ಮಿಸುತ್ತೇವೆ.

ಡಾ.ರಾಘವೇಂದ್ರಸ್ವಾಮಿ, ತಾಲೂಕಾಸ್ಪತ್ರೆ ಆಡಳಿತಾಧಿಕಾರಿ



ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net