ಖರೀದಿಗೆ ನೋಂದಣಿ: ಸ್ಥಳಕ್ಕೆ ಆಗಮಿಸಿದ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಮಾತನಾಡಿ, ಈಗಾಗಲೇ ಮೆಕ್ಕೆಜೋಳ ಖರೀದಿಗೆ ನೋಂದಣಿ ಶುರುವಾಗಿದ್ದು, ಡಿ.8ರಿಂದ ಖರೀದಿ ಕೇಂದ್ರ ಆರಂಭಿಸಲಾಗುವುದು. ರಟ್ಟಿಹಳ್ಳಿ ಮತ್ತು ಮಾಸೂರು ಆಸ್ಪತ್ರೆ ಕೆಳದರ್ಜೆಗಿಳಿಸುವ ಆದೇಶ ಹಿಂಪಡೆಯವಂತೆ ಸರ್ಕಾರಕ್ಕೆ ಮಾಹಿತಿ ಕಳುಹಿಸಲಾಗಿದೆ. ರೈತರಿಗೆ ಹಂತ ಹಂತವಾಗಿ ಬೆಳೆ ಹಾನಿ ಪರಿಹಾರ ಜಮೆ ಮಾಡಲಾಗುವುದು. ಜಿಲ್ಲಾ ಪೊಲೀಸ್ ಇಲಾಖೆಯೊಂದಿಗೆ ಸಭೆ ನಡೆಸಿ, ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲಾಗುವುದು ಎಂದರು.